ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಜಂತು ಹುಳುಗಳನ್ನು ಹೊಂದಿರುವ ಮಕ್ಕಳು ಅಪೌಷ್ಠಿಕತೆ ಮತ್ತು ರಕ್ತಹೀನತೆಯಿಂದ ಬಳಲುವ ಸಾಧ್ಯತೆಯಿದ್ದು ಕಡ್ಡಾಯವಾಗಿ ಮಾತ್ರೆ ಸೇವಿಸುವ ಮೂಲಕ ಜಂತು ಹುಳಗಳಿಂದ ಬರುವ ಕಾಯಿಲೆಯಿಂದ ತಮ್ಮನ್ನು ರಕ್ಷಿಸಿಕೊಳ್ಳಬೇಕೆಂದು ಚಿಮ್ಮಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೆ.ಎಸ್.ತಳ್ಳಿ ಹೇಳಿದರು.
ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಮ್ಮಿಕೊಳ್ಳಲಾಗಿದ್ದ ಅಂತರ್‌ರಾಷ್ಟ್ರೀಯ ಜಂತುಹುಳು ಬಾಧೆ ನಿವಾರಣಾ ದಿನಾಚರಣೆ ಪ್ರಯುಕ್ರ ಮಕ್ಕಳಿಗೆ ಜಂತುಹುಳು ನಿವಾರಕ ಮಾತ್ರೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಅಪೌಷ್ಠಿಕತೆ, ರಕ್ತಹೀನತೆಗೆ ಕಾರಣವಾಗುವ ಜಂತು ಹುಳುವಿನಿಂದ ರಕ್ಷಣೆ ನೀಡಲು ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಉಚಿತವಾಗಿ ಮಾತ್ರೆಗಳನ್ನು ನೀಡಲಾಗುತಿದ್ದು ಪ್ರತಿಯೊಬ್ಬ ವಿದ್ಯಾರ್ಥಿಗಳು ಸೇವಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರು.
ಸರಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯೆ ಶ್ರೀಮತಿ ಎಂ.ಎಸ್. ಜಿಟ್ಟಿ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಬಿ.ಎಂ. ಮಾದರ, ಸಹ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

