Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಠಗಳ ದಾಸೋಹ, ಶೈಕ್ಷಣಿಕ ಸೇವೆ ಶ್ಲಾಘನೀಯ :ನೀಲಕಂಠಮಠ
(ರಾಜ್ಯ ) ಜಿಲ್ಲೆ

ಮಠಗಳ ದಾಸೋಹ, ಶೈಕ್ಷಣಿಕ ಸೇವೆ ಶ್ಲಾಘನೀಯ :ನೀಲಕಂಠಮಠ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ನಾಡಿನಲ್ಲಿರುವ ಮಠಗಳ ದಾಸೋಹ ಹಸಿವು ನೀಗಿಸಿದರೆ ಅದರಡಿಯಲ್ಲಿರುವ ಶೈಕ್ಷಣಿಕ ಕೇಂದ್ರಗಳು ಲಕ್ಷಾಂತರ ವಿದ್ಯಾರ್ಥಿಗಳು ಭವಿಷ್ಯ ರೂಪಿಸುವ ಕೈಂಕರ್ಯ ಶ್ಲಾಘನೀಯ ಎಂದು ಗುಳೇದಗುಡ್ಡದ ನಿವೃತ್ತ ಪ್ರಾಧ್ಯಾಪಕ ಎಂ.ಪಿ.ನೀಲಕಂಠಮಠ ಹೇಳಿದರು.
ಪಟ್ಟಣದ ಈರಕಾರ ಮುತ್ಯಾ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಘಟಕವು ಶನಿವಾರ ಹಮ್ಮಿಕೊಂಡಿದ್ದ ಉಪನ್ಯಾಸ ಮತ್ತು ಸನ್ಮಾನ ಸಮಾರಂಭದಲ್ಲಿ ದಾಸೋಹ ಮತ್ತು ಶೈಕ್ಷಣಿಕ ಕ್ರಾಂತಿಯಲ್ಲಿ ಮಠಗಳು ಕುರಿತು ಮಾತನಾಡಿದ ಅವರು, ೧೮೫೬ ರಲ್ಲಿ ಚಿತ್ರದುರ್ಗದ ಜಗದ್ಗುರುಗಳು, ಡೆಪ್ಯೂಟಿ ಚನ್ನಬಸಪ್ಪನವರು ಮೊದಲ ಘಟದಲ್ಲಿ ದಾಸೋಹ ಆರಂಭ ಮಾಡುವ ಜೊತೆಗೆ ಅಕ್ಷರ ದಾಸೋಹವನ್ನು ಆರಂಭಿಸಿದರು. ದ್ವಿತೀಯ ಘಟದಲ್ಲಿ ಧಾರವಾಡದ ಲಿಂಗಾಯತ ಅಭಿವೃದ್ಧಿ ಸಂಸ್ಥೆ, ಮೂರನೇ ಘಟಕದಲ್ಲಿ ಬಂಥನಾಳ ಶ್ರೀಗಳು, ಬಾಗಲಕೋಟದಲ್ಲಿ ಗುರುಬಸವ ಸ್ವಾಮೀಜಿ, ಸುತ್ತೂರು, ತುಮಕೂರು, ಭಾಲ್ಕಿ, ಗುಳೇದಗುಡ್ಡದ ಗುರುಸಿದ್ದೇಶ್ವರರು, ಧಾರವಾಡದ ಮುರಘಾಮಠ, ಹುಬ್ಬಳ್ಳಿಯ ಮೂರುಸಾವಿರ ಮಠ, ಗದಗದ ತೋಂಟದಾರ್ಯ ಮಠ ಸೇರಿದಂತೆ ಅನೇಕ ಮಠಗಳು ಈ ನಿಟ್ಟಿನಲ್ಲಿ ಕೈಂಕರ್ಯ ಮಾಡುತ್ತಿವೆ. ಸಾಲಿಮಠವು ಇದರಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ ಎಂದರು.
ವಿದ್ಯಾದಾನ, ಅನ್ನದಾನ ಸೇರಿದಂತೆ ದಾನಗಳಲ್ಲಿ ೧೬ ವಿಧಗಳಿವೆ. ಇದರಲ್ಲಿರುವ ಕನ್ಯಾದಾನ ಎಂಬುವದನ್ನು ನೋಡಿದರೆ ಕನ್ಯಾ ಎಂಬುವದು ವಸ್ತುನಾ ಎಂದು ಪ್ರಶ್ನೆ ಎದುರಾಗುತ್ತದೆ. ಈ ಕಾರಣದಿಂದಾಗಿ ಇದನ್ನು ದಾನಗಳಿಂದ ಹೊರಗಿಡಬೇಕೆಂದು ಅಭಿಪ್ರಾಯ ಪಟ್ಟ ಅವರು, ಗುರು-ಲಿಂಗ-ಜಂಗಮ ಬಗ್ಗೆ ಭಕ್ತಿ ಹೊಂದಿರಬೇಕು. ವೀರಶೈವ ಲಿಂಗಾಯತ ಅನ್ನದೇ ತತ್ವವೇ ಶ್ರೇಷ್ಠ ಎಂಬುವದನ್ನು ಅರಿತುಕೊಂಡು ನಡೆಯಬೇಕಾದ ಅಗತ್ಯವಿದೆ. ಮಠಗಳ ಸಂಸ್ಕ್ರತಿಯಲ್ಲಿ ಬೆಳೆಯುವವರು ಉನ್ನತ ವಿಚಾರಧಾರೆ ಹೊಂದಿರುತ್ತಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ವ್ಹಿ.ಸಿ.ನಾಗಠಾಣ ಮಾತನಾಡಿ, ದಕ್ಷಿಣ ಕರ್ನಾಟಕದಲ್ಲಿ ವೀರಶೈವ, ಉತ್ತರ ಕರ್ನಾಟಕದಲ್ಲಿ ಲಿಂಗಾಯತ ಅನ್ನುವ ರೂಢಿಯಿದೆ. ಇವೆರಡೂ ಒಂದೇಯಾಗಿದೆ. ಹಿಂದೆ ಸಿದ್ದರಾಮಯ್ಯನವರ ಬೆಂಬಲದೊಂದಿಗೆ ಎಂ.ಬಿ.ಪಾಟೀಲರು, ಬಸವರಾಜ ಹೊರಟ್ಟಿ, ವಿನಯ ಕುಲಕರ್ಣಿ ಇವರೆಲ್ಲರೂ ಸೇರಿ ಲಿಂಗಾಯತ ಹೋರಾಟ ಆರಂಭಿಸಿ ಗೊಂದಲ ಸೃಷ್ಟಿಸಿದರು. ವಿಜಯಪುರದಲ್ಲಿನ ವೀರಶೈವ ಲಿಂಗಾಯತ ಭವನದಲ್ಲಿ ಸಮಾಜದ ಬಡಮಕ್ಕಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಲಿಂಗಾಯತ ಎಂದು ಕಟ್ಟುನಿಟ್ಟಾಗಿ ಹೇಳುವವರು ತಮ್ಮ ಮನೆಗಳಲ್ಲಿನ ಜಗಲಿಗಳ ಮೇಲೆ ಕೇವಲ ಲಿಂಗವೊಂದನ್ನೇ ಇರಿಸಿ ಪೂಜೆ ಮಾಡುತ್ತಾರೆಯೇ ಎಂದು ಪ್ರಶ್ನಿಸಿದರು.
ಸಾನಿಧ್ಯ ವಹಿಸಿದ್ದ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಾನಗಲ್ ಕುಮಾರಸ್ವಾಮೀಜಿಯವರು ಮಹಾಸಭಾ ಹುಟ್ಟು ಹಾಕಿದರು. ಇಂದು ಲಿಂಗಾಯತ, ವೀರಶೈವ ಬೇರೆ ಬೇರೆ ಎಂದು ಹೇಳುತ್ತಿರುವದು ಸರಿಯಾದುದಲ್ಲ. ಇವೆರಡು ಒಂದೇ ಎಂದರು.
ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಸಾಹಿತಿ ಸಹದೇವ ಗುಡದಿನ್ನಿ ಮಾತನಾಡಿದರು.
ವೇದಿಕೆಯಲ್ಲಿ ಮಹಾಸಭಾದ ನಿರ್ದೇಶಕ ಬಿ.ಎಸ್.ಬಿರಾದಾರ ಇದ್ದರು. ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಮಹಾಂತೇಶ ಸಂಗಮ ಪ್ರಾಸ್ತವಿಕವಾಗಿ ಮಾತನಾಡಿದರು. ಶಿವು ಹೆರಕಲ್ ಪ್ರಾರ್ಥಿಸಿದರು. ಶಶಿ ಪಾಟೀಲ ಸ್ವಾಗತಿಸಿದರು. ಪ್ರಭಾಕರ ಖೇಡದ ನಿರೂಪಿಸಿದರು. ಶ್ರೀಶೈಲ ಶಿರಗುಪ್ಪಿ ವಂದಿಸಿದರು. ಬಸವನಬಾಗೇವಾಡಿಯ ಎಲ್ಟಿ ನಂ-೨ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಜ್ಞಾನಭಾರತಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ವಚನ ನೃತ್ಯ ಜರುಗಿತು. ಇದೇ ಸಂದರ್ಭದಲ್ಲಿ ಮಹಾಸಭಾದ ಇಂಡಿ ತಾಲೂಕಿನ ಅಧ್ಯಕ್ಷ ಪ್ರಭುಲಿಂಗ ಕತ್ತಿ, ಮುದ್ದೇಬಿಹಾಳದ ವೆಂಕನಗೌಡ ಪಾಟೀಲ, ಸಿಂದಗಿಯ ಅಶೋಕ ವಾರದ, ವಿಜಯಪುರದ ಬಸವರಾಜ ಇಟ್ಟಂಗಿ, ಬಸವನಬಾಗೇವಾಡಿ ತಾಲೂಕು ಘಟಕದ ಎಲ್ಲ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.