ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಬಸವನಾಡಿನ ನಡೆದಾಡುವ ದೇವರಾಗಿದ್ದ ಜ್ಞಾನಯೋಗಿ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರ ಗುರುನಮನ ಜನೇವರಿ ೧ ಮತ್ತು ೨ ರಂದು ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಜರುಗುತ್ತಿದೆ. ಈ ಕಾರ್ಯಕ್ರಮದ ಕುರಿತು ಮಾಹಿತಿಯನ್ನು ನೀಡಲು ಡಿ.೨೧ ರಂದು ಬೆಳಗ್ಗೆ ೧೧ ಗಂಟೆಗೆ ಬಸವನಬಾಗೇವಾಡಿಯ ಬಸವ ಭವನದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ನಂದಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸತ್ಯಜೀತ ಪಾಟೀಲ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.೨೧ ರಂದು ನಡೆಯುವ ಪೂರ್ವಭಾವಿ ಸಭೆಗೆ ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ, ಹರ್ಷಾನಂದ ಸ್ವಾಮೀಜಿ, ಸ್ಥಳೀಯ ಉಭಯ ಮಠಗಳ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ, ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಅನೇಕ ಗಣ್ಯರು ಆಗಮಿಸುವರು. ಈ ಪೂರ್ವಭಾವಿ ಸಭೆಗೆ ಬಸವನಾಡಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ಪೂರ್ವಭಾವಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ ಇದ್ದರು.

