ಆಲಮೇಲ: ತಾಲ್ಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ತಾಲ್ಲೂಕಿನ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಮುನ್ನ ಸರ್ವಾಧ್ಯಕ್ಷ ರ ಚನ್ನವೀರ ಶಾಸ್ತ್ರೀ ಹಿರೇಮಠ ಅವರ ಮೆರವಣಿಗೆ ನಡೆಯಿತು.
ಈ ಮೆರವಣಿಗೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಹಾಂತೇಶ ಯಡ್ರಾಮಿ ಚಾಲನೆ ನೀಡಿದರು. ತೆರೆದ ವಾಹನದಲ್ಲಿ ಹಳೇ ವಿಭೂತಿಹಳ್ಳಿಯಿಂದ ಗ್ರಾಮದ ಪ್ರಮುಖ ರಸ್ತೆಯ ಮಾರ್ಗವಾಗಿ ಹೊಸ ವಿಭೂತಿಹಳ್ಳಿ ಗ್ರಾಮದ ಶ್ರೀ ಭಾಗ್ಯವಂತಿ ದೇವಿ ದೇವಸ್ಥಾನದ ಆವರಣದತ್ತ ಮೆರವಣಿಗೆ ಸಾಗಿತು.
ಜನಪದ ಕಲಾ ತಂಡಗಳು, ಭಜನಾಮಂಡಳಗಳು, ದೊಳ್ಳು ಕುಣಿತ ತಂಡಗಳು ಮೆರವಣಿಗೆ ಉದ್ದಕ್ಕೂ ಸಾಗಿದವು.ವಿಭೂತಿ ಹಳ್ಳಿ ಗ್ರಾಮ ಸೇರಿದಂತೆ ತಾಲ್ಲೂಕಿನಾದ್ಯಂತ ಕನ್ನಡ ಪರ ಸಂಘಟನೆಗಳು, ಗ್ರಾಮದ ಪ್ರಮುಖರು,ಮಹಿಳೆಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸರ್ವಾಧ್ಯಕ್ಷ ರ ಮೆರವಣಿಯಲ್ಲಿ ಭಾಗವಹಿಸಿದ್ದರು.
ಸಭಾಧ್ಯಕ್ಷರ ತೆರೆದ ವಾಹನವನ್ನು ವಿಶೇಷ ಅಲಂಕಾರ ಮಾಡಲಾಗಿತ್ತು. ವಿಭೂತಿಹಳ್ಳಿ ಗ್ರಾಮದಲ್ಲಿ ಇದೇ ಮೊದಲನೇ ಬಾರಿಗೆ ಸಮ್ಮೇಳನ ನಡೆಯುತ್ತಿದ್ದರಿಂದ ಗ್ರಾಮಸ್ಥರು ಸಂಭ್ರಮ ಪಟ್ಟರು. ಗ್ರಾಮದ ಪ್ರಮುಖ ಬೀದಿಗಳನ್ನು ಸ್ವಚ್ಛಗೊಳಿಸಿ ರಂಗೋಲಿಯಿಂದ ಶೃಂಗರಿಸಿದ್ದರು. ಯುವಕರು ಪಟಾಕಿ ಸಿಡಿಸಿ, ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

