ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಅವರು ಡಿ.೧೭ ಹಾಗೂ ೧೮ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಡಿ.೧೬ ರಂದು ರಾತ್ರಿ ೧೧ ಗಂಟೆಗೆ ವಿಜಯಪುರಕ್ಕೆ ಆಗಮಿಸಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಡಿ.೧೭ ರಂದು ಮಧ್ಯಾಹ್ನ ೧೨ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದಿಂದ ನೀಡಲಾದ ಅನುದಾನದ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ೩-೩೦ಕ್ಕೆ ವಿಜಯಪುರ ಜಿಲ್ಲೆ ಮತ್ತು ಮಹಾರಾಷ್ಟç ರಾಜ್ಯದ ಗಡಿ ಗ್ರಾಮಗಳ ವಿವಿಧ ಗಡಿ ಕನ್ನಡ ಶಾಲೆಗಳು ಹಾಗೂ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದಿಂದ ನೀಡಲಾದ ಅನುದಾನಗಳಿಗೆ ಸಂಬಂಧಿಸಿದ ಕಾಮಗಾರಿಗಳ ವೀಕ್ಷಣ ಮಾಡಿ ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಡಿ.೧೭ರಂದು ಬೆಳಿಗ್ಗೆ ೮-೩೦ಕ್ಕೆ ವಿಜಯಪುರದಿಂದ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
