ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ತಾಲ್ಲೂಕನ್ನು ನೋಡಲ್ ತಾಲ್ಲೂಕಾಗಿ ಮಾಡಿಕೊಂಡಿರುವ ವಿಧಾನ ಪರಿಷತ್ ಸದಸ್ಯರಾದ ಕೇಶವ ಪ್ರಸಾದ ಎಸ್ ಅವರನ್ನು ಮಹಾನಗರ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ನಗರ ಮಂಡಲ ಪದಾಧಿಕಾರಿಗಳು ಶನಿವಾರ ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ಶಿವರುದ್ರ ಬಾಗಲಕೋಟ, ಎಂ.ಎಸ್.ಕರಡಿ, ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ಕಿರಣ ಪಾಟೀಲ, ರಾಜಶೇಖರ ಕುರಿಯವರ, ವಿಠ್ಠಲ ಹೊಸಪೇಟ, ಕುಮಾರ ಗಡಗಿ, ಜವಾಹರ ಗೋಸಾವಿ, ಗಿರೀಶ ಪಾಟೀಲ, ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಶಂಕರ ಹೂಗಾರ, ಮುಖಂಡರಾದ ಮಹೇಶ ಒಡೆಯರ, ಚಂದ್ರು ಚೌದರಿ, ಅಮಿತ್ ಗರುಡಕರ ಮತ್ತಿತರರು ಉಪಸ್ಥಿತರಿದ್ದರು.

