Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತ್ತಮ ಜೀವನ ಪದ್ಧತಿಯಲ್ಲಿದೆ ಆರೋಗ್ಯ ಸಂಪತ್ತು :ಡಾ.ದೇಶಮುಖ
(ರಾಜ್ಯ ) ಜಿಲ್ಲೆ

ಉತ್ತಮ ಜೀವನ ಪದ್ಧತಿಯಲ್ಲಿದೆ ಆರೋಗ್ಯ ಸಂಪತ್ತು :ಡಾ.ದೇಶಮುಖ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಿಕೋಟಾ ನೂತನ ಮಹಾವಿದ್ಯಾಲಯದಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಮನುಷ್ಯ ನಿತ್ಯದ ಜಂಜಾಟದಲ್ಲಿ ತನ್ನ ಸ್ವಯಂ ಆರೋಗ್ಯದ ರಕ್ಷಣೆಯನ್ನೇ ಮರೆಯುತ್ತಿರುವುದು ತುಂಬಾ ದುರ್ದೈವದ ಸಂಗತಿಯಾಗಿದೆ ಎಂದು ಬಿ.ಎಲ್.ಡಿ.ಇ. ಆಯುರ್ವೇದ ಮಹಾವಿದ್ಯಾಲಯದ ಡಾ. ಆರ್ .ಎ.ದೇಶಮುಖ ಅವರು ಹೇಳಿದರು.
ವಿಜಯಪುರದ ಬಿ.ಎಲ್.ಡಿ.ಇ. ಆಯುರ್ವೇದ ಮಹಾವಿದ್ಯಾಲಯ ಹಾಗೂ ನೂತನ ಮಹಾವಿದ್ಯಾಲಯ ಕಾಲೇಜು ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಅಂತರ್ ಶುದ್ದಿ ಬಾಹ್ಯ ಶುದ್ದಿಯಿಂದ ಇರುವುದು ಮುಖ್ಯವೆನಿಸುತ್ತದೆ.ನಾವು ಇವತ್ತು ಎದುರಿಸುವ ಅನೇಕ ರೋಗಗಳಿಗೆ ಮನೆ ಮದ್ದುಗಳ ಮೂಲಕವೇ ಪರಿಹಾರ ಮಾಡಿಕೊಳ್ಳಲು ಅವಕಾಶ ಇದೆ. ಆದರೆ ಮನೆ ಮದ್ದುಗಳ ಅರಿವು ಅಗತ್ಯವಾಗಿದೆ. ಪ್ರತಿ ವ್ಯಕ್ತಿ ತನ್ನ ಜೀವನದಲ್ಲಿ ಪ್ರಮುಖ ಮೂರು ಸ್ಥಂಬಳಗಳಾದ ಆಹಾರ, ನಿದ್ರೆ, ಬ್ರಹ್ಮಚರ್ಯ ಇವುಗಳನ್ನು ನಿಯಮಿತವಾಗಿ ಪಾಲಿಸಿದ್ದಾದರೆ ರೋಗ ಮುಕ್ತ ಜೀನವ ನಡೆಸಲು ಅನುಕೂಲವಾಗುತ್ತದೆ. ಇವತ್ತು ಚಿಕ್ಕ ಮಕ್ಕಳೆಲ್ಲ ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿರುವುದು ಜಂಕ್ ಫುಡ್ ನಂತಹ ರಾಸಾಯನಿಕ ಯುಕ್ತ ಆಹಾರ ಸೇವನೆ ಒಂದು ಕಾರಣವಾಗಿದೆ. ಹೀಗಾಗಿ ಉತ್ತಮ ದೇಶಿ ಆಹಾರ ಪದ್ದತಿ ನಮ್ಮದಾಗಿಸುವ ಮೂಲಕ ನಮ್ಮ ಪ್ರಕೃತಿಯನ್ನು ಚನ್ನಾಗಿ ಕಾಯ್ದುಕೊಳ್ಳಬೇಕಿದೆ ಎಂದರು.
ಇದಕ್ಕೂ ಮುನ್ನ, ಡಾ. ಪರಮೇಶ್ವರಿ ಮಾತನಾಡಿ, ಬ್ರಾಹ್ಮಿ ಮುಹೂರ್ತದಲ್ಲಿ ಎದ್ದೇಳುವುದು ರೂಢಿಯಲ್ಲಿಡಬೇಕು. ಒಂದು ನಗು ಎರಡು ಹೃದಯಗಳನ್ನು ಸೇರಿಸುತ್ತದೆ. ನಗುವಿನಲ್ಲಿಯೂ ಆರೋಗ್ಯದ ಗುಟ್ಟು ಅಡಗಿದೆ. ವಾತ,ಪಿತ್ತ ಕಫ ಈ ಮೂರರಿಂದ ಪ್ರಕೃತಿ ನಿರ್ಮಿತವಾಗಿದೆ. ಪ್ರಕೃತಿ ಅನುಗುಣವಾಗಿ ಔಷಧಿ ನೀಡುವುದು ಆಯುರ್ವೇದ ತಿಳಿಸುತ್ತದೆ. ದಿನಚರ್ಯ ಹಾಗೂ ಋತುವಿಗನುಗುಣವಾಗಿ ಆಹಾರ ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆಯದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಆರ್.ಬಿ.ಶಿರಸಂಗಿ ಅವರು ಮಾತನಾಡಿ, ಬಾಲ್ಯದಿಂದಲೇ ಇವತ್ತು ಒತ್ತಡದ ಜೀವನ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳಾದವರು ವೈದ್ಯರು ತಿಳಿಸಿದ ಆರೋಗ್ಯ ಸಲಹೆಗಳನ್ನು ಪಾಲಿಸಿದರೆ ಈಗಿನಿಂದಲೇ ತಾವೆಲ್ಲರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪ್ರೊ.ಆರ್.ಬಿ.ಸಿರಸಂಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಡಾ. ಆರ್.ಎ.ದೇಶಮುಖ , ಡಾ. ಪರಮೇಶ್ವರಿ, ಡಾ.ಅಶ್ವಿನಿ ಸಜ್ಜನವರ್, ಡಾ. ಮಂಜುಳಾ ಹೆಚ್. ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ. ದೇಸಾಯಿ, ಪ್ರೊ. ಶಿವಮೂರ್ತಿ ಚಿಕನರ್ತಿ, ಡಾ. ಸಂತೋಷ ನವಲಗುಂದ, ಪ್ರೊ. ಗಣೇಶ ಕಾಂಬ್ಳೆ, ಪ್ರೊ. ಸ್ವಪ್ನಾ, ಪ್ರೊ. ಎಸ್.ಬಿ.ಉಪ್ಪಾರ, ಪ್ರೊ. ಸಂತೋಷ, ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.