ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರವಾಸೋದ್ಯಮ ಇಲಾಖೆಯಿಂದ ೨೦೨೪-೨೫ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ-ಆಥಿತ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತರು ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಪಡೆದು, ಡಿಸೆಂಬರ್ ೨೮ರ ಸಂಜೆ ೫ ಗಂಟೆಯೊಳಗಾಗಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿ ಪ್ರವಾಸೋಧ್ಯಮ ಕಾರ್ಯಾಲಯ, ಪ್ರವಾಸಿ ಪ್ಲಾಜಾ, ಬ್ಲಾಕ್-೧, ಇಂಡಿ ರಸ್ತೆ ಇಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರವಾಸೊಧ್ಯಮ ಇಲಾಖೆಯ ದೂರವಾಣಿ ಸಂಖ್ಯೆ ೦೮೩೫೨-೨೫೦೩೫೯ ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ ಭಜಂತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
