ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾನಗರ ಪಾಲಿಕೆಯ ಆಯ-ವ್ಯಯ ಬಜೆಟ್ ಸಾರ್ವಜನಿಕ ಪೂರ್ವಭಾವಿ ಸಭೆಯನ್ನು ಇದೇ ದಿನಾಂಕ : ೧೯-೧೨-೨೦೨೪ರ ಮಧ್ಯಾಹ್ನ ೪ ಗಂಟೆಗೆ ಮಹಾನಗರ ಪಾಲಿಕೆ ಮುಖ್ಯ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ತಿಳಿಸಿದ್ದಾರೆ.
ಮಹಾನಗರ ಪಾಲಿಕೆಯ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕರು, ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳು, ವ್ಯಾಪಾರ ಮತ್ತು ಕೈಗಾರಿಕಾ ಸಂಸ್ಥೆ ಒಕ್ಕೂಟಗಳ ಸದಸ್ಯರು ಮತ್ತು ಇತರೆ ಸಂಘ-ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿ ಸೂಕ್ತ ಸಲಹೆ-ಸೂಚನೆಗಳನ್ನು ನೀಡುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
