ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇ-ಆಡಳಿತದ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ್ ಘೋಷ ಅವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು, ಡಿಸೆಂಬರ್ ೧೮ರಂದು ಜಿಲ್ಲೆಯ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವಸತಿ ನಿಲಯಗಳಿಗೆ ಹಾಗೂ ಶಾಲೆ, ಕಾಲೇಜು ಮತ್ತು ಐಟಿಐಗಳಿಗೆ ಭೇಟಿ ನೀಡಲಿದ್ದಾರೆ. ಜಿಲ್ಲೆಯಲ್ಲಿನ ಹಾಸ್ಟೇಲ್‌ಗಳು, ಆಸ್ಪತ್ರೆಗಳಿಗೆ, ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರ ಕಚೇರಿಗಳಿಗೆ ಭೇಟಿ ನೀಡಿ, ವಿಪತ್ತು ನಿರ್ವಹಣಾ ಯೋಜನೆಯ ಪರಿಶೀಲನೆ ಹಾಗೂ ಇತರೆ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಅಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೨ರವರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಂದು ವಿಜಯಪುರದಿಂದ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
