ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇತ್ತೀಚೆಗೆ ಓಡಿಸ್ಸಾ ರಾಜ್ಯದ ಪುರಿ ಜಿಲ್ಲೆಯಲ್ಲಿ ನಡೆದ ರಾಷ್ಟ್ರ ಮಟ್ಟದ ೨೯ ನೇ ನ್ಯಾಷನಲ್ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್ ೧೦ ಕಿ.ಮೀ ಟಿಮ್ ಟೈಮ್ ಟ್ರಯಲ್‌ನಲ್ಲಿ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕರಿಷ್ಮಾ ಮಲಿಕಸಾಬ ತಟಗಾರ ೧೪ ವರ್ಷ ವಯೋಮಿತಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿ ಪದಕವನ್ನು ಪಡೆಯುವ ಮೂಲಕ ರಾಜ್ಯ, ಜಿಲ್ಲೆ ಹಾಗೂ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ.
ವಿದ್ಯಾರ್ಥಿಯ ಈ ಸಾಧನೆಗೆ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಿ.ಎಲ್.ಚವ್ಹಾಣ್, ಕಾರ್ಯಾಧ್ಯಕ್ಷ ಕೆ.ಜಿ.ರಾಠೋಡ, ಕಾರ್ಯದರ್ಶಿಗಳಾದ ಆರ್.ಡಿ.ಚವ್ಹಾಣ್, ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಇ.ಡಿ.ಲಮಾಣಿ, ಪ್ರಾಥಮಿಕ ಶಾಲೆಯ ಮುಖ್ಯ ಗುರು ಎಂ.ಎಲ್.ಚವ್ಹಾಣ್‌ರವರುಗಳು ಸೇರಿದಂತೆ ಶಾಲೆಯ ಶಿಕ್ಷಕ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

