ಇಂಡಿ: ಮೇ 3ರ ಸಾಯಂಕಾಲ 5:೦೦ ಗಂಟೆಗೆ ಪಟ್ಟಣದ ಸಿಂದಗಿ ರಸ್ತೆಯ ಧನಶೆಟ್ಟಿ ಮಂಗಲ ಕಾರ್ಯಾಲಯದಲ್ಲಿ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಇಂಡಿ ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ವಿ.ಹೆಚ್. ಬಿರಾದಾರ, ಜಿಲ್ಲಾ ಪಂಚಮಸಾಲಿ ಯುವ ಘಟಕದ ಅಧ್ಯಕ್ಷ ಸೋಮಶೇಖರ ದೇವರ ತಿಳಿಸಿದರು.
ಅವರು ಶುಕ್ರವಾರ ಪಟ್ಟಣದ ಶ್ರೀ ಶಾಂತೇಶ್ವರ ಸೌಹಾರ್ದ ಸಹಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗುವ ಸಲುವಾಗಿ ದಶಕಗಳ ಕಾಲ ಹೋರಾಟ ನಡೆಸಿದ ಜಯ ಮೃತ್ಯುಂಜಯ ಮಹಾಸ್ವಾಮೀಜಿಗಳಿಗೆ ಅಭಿನಂದಿಸುವ ನಿಟ್ಟಿನಲ್ಲಿ ಗುರುವಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ಪಂಚಮಸಾಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗುರುಗಳಿಗೆ ಅಭಿನಂದನೆ ಸಲ್ಲಿಸಬೇಕೆಂದು ಅವರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಅನೀಲ ಏಳಗಿ, ಅನೀಲಗೌಡ ಪಾಟೀಲ್, ಶಿವಾನಂದ ಚಾಳೀಕಾರ್, ಬಾಳು ಮುಳಜಿ, ಶರಣು ಬಂಡಿ, ಶಾಂತುಗೌಡ ಬಿರಾದಾರ್, ಅಂಬೂರಾವ್ ಕವಟಗಿ, ಮಲ್ಲು ಚಾಕುಂಡಿ, ಅರವಿಂದ ಪಾಟೀಲ್, ಶ್ರೀಶೈಲಗೌಡ ಬಿರಾದಾರ ಸೇರಿದಂತೆ ಇನ್ನಿತರರು ಇದ್ದರು.
Related Posts
Add A Comment