ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಡ್ರೋನ್ ಆಧಾರಿತ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿಗಾಗಿ ಪರಿಶಿಷ್ಟ ಪಂಗಡದ ಅರ್ಹ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ೧೮ ರಿಂದ ೪೦ ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಡಿಸೆಂಬರ್ ೨೩ ರೊಳಗಾಗಿ ಜಿಲ್ಲಾ ಹಾಗೂ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಾಗೂ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
