Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆ.ಎಂ.ಎಫ್ ಘಟಕಕ್ಕೆ ಭೇಟಿ ನೀಡಿದ ಜಿ.ಪಂ ಸಿಇಓ ರಿಷಿ ಆನಂದ
(ರಾಜ್ಯ ) ಜಿಲ್ಲೆ

ಕೆ.ಎಂ.ಎಫ್ ಘಟಕಕ್ಕೆ ಭೇಟಿ ನೀಡಿದ ಜಿ.ಪಂ ಸಿಇಓ ರಿಷಿ ಆನಂದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಮಂಗಳವಾರ ವಿಜಯಪುರ-ಬಾಗಲಕೋಟ ಕರ್ನಾಟಕ ಹಾಲು ಒಕ್ಕೂಟ ಮಂಡಳಿ ವಿಜಯಪುರ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಾಲಿನ ಪೌಡರ್ ಸರಬರಾಜು ಮಾಡುವ ವಾಹನಗಳ ವಿವರ, ಪ್ರಸ್ತುತ ಸಾಲಿನ ಅಗಸ್ಟ್ ೨೦೨೪ರಿಂದ ಅಕ್ಟೋಬರ ೨೦೨೪ರವರೆಗೆ ಒಟ್ಟು ೫೧ ದಿನಗಳಿಗೆ ಹಾಲಿನ ಪೌಡರ್ ಬೇಡಿಕೆ ಹಾಗೂ ಪೂರೈಕೆ ಮಾಡಿದ ಪ್ರಮಾಣ ಕುರಿತು ಪರಿಶೀಲನೆ ನಡೆಸಿದ ಹಾಲಿನ ಪೌಡರ್ ಪೂರೈಕೆಯಾಗಿರುವ ದಾಖಲೆಗಳ ಮೂಲಕ ಮಾಹಿತಿ ಪಡೆದುಕೊಂಡರು.
ಹಾಲಿನ ಪೌಡರ್ ಪೂರೈಸುವ ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದ ವ್ಯಾಪ್ತಿಯಲ್ಲಿರುವ ಡೆಂಪೋ ಡೈರಿಯಿಂದ ಪೂರೈಕೆಯಾಗುವ ವಾಹನದ ಮಾಹಿತಿ, ಹಾಲಿನ ಪುಡಿಯ ಪ್ರಮಾಣವನ್ನು ಮತ್ತು ಕರ್ನಾಟಕ ಹಾಲು ಒಕ್ಕೂಟ ಮಂಡಳಿ(ಕೆ.ಎಮ್.ಎಫ್ ಘಟಕ)ಯಿಂದ ಸಲ್ಲಿಸಿರುವ ಬೇಡಿಕೆಯ ಪ್ರಮಾಣವನ್ನು ತಾಳೆ ಮಾಡಿದರು. ಹಾಲಿನ ಪುಡಿ ಶಾಲೆಗಳಿಗೆ ಪೂರೈಸಲು ಗಣಕಯಂತ್ರದಲ್ಲಿ ಮಾರ್ಗ ನಕ್ಷೆ ಹಾಗೂ ಬೇಡಿಕೆಯ ವಿವರಗಳನ್ನು ಖುದ್ದಾಗಿ ವೀಕ್ಷಿಸಿದರು. ಶಾಲೆಗಳಿಂದ ಹಾಲಿನ ಪೌಡರ್ ಬೇಡಿಕೆ ಪಡೆಯುವಾಗ ಅನುಸರಿಸುವ ಕ್ರಮಗಳನ್ನು ಮತ್ತು ಹಾಲಿನ ಪೌಡರ್ ಪ್ರಮಾಣ ನಿಗದಿಪಡಿಸುವ ವಿಧಾನಗಳ ಕುರಿತು ಪರಿಶೀಲಿಸಿದರು. ಅಲ್ಲದೇ ಈ ಕೈಗಾರಿಕಾ ಘಟಕದಲ್ಲಿ ತಯಾರಿಸುವ ಉತ್ಪನ್ನಗಳು, ಯಂತ್ರಗಳು, ಉತ್ಪನ್ನಗಳನ್ನು, ಶಿಥೀಲೀಕರಣ ಮಾಡುವ ಕೊಠಡಿ, ಉತ್ಪಾದಿಸಿರುವ ಉತ್ಪನ್ನಗಳು, ಘಟಕದ ಹೊರಾಂಗಣ ಹಾಗೂ ಒಳಾಂಗಣ ಆವರಣಗಳು ಹಾಗೂ ಘಟಕದಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಸಿಬ್ಬಂದಿ ವಿವರಗಳನ್ನು ಪರಿಶೀಲಿಸಿದರು.
ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅಕ್ಷರ ದಾಸೋಹ ಕಛೇರಿಯಿಂದ ಬೇಡಿಕೆ ಸಲ್ಲಿಸಿದ ೧೫ ದಿನಗಳೊಳಗಾಗಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ಕಡ್ಡಾಯವಾಗಿ ಪೂರೈಕೆ ಮಾಡಬೇಕು. ಹಾಲಿನ ಪೌಡರ್ ಪೂರೈಕೆ ಮಾಡುವ ಸಂದರ್ಭದಲ್ಲಿ ತಾಲೂಕಾವಾರು ಪ್ರತ್ಯೇಕ ಮಾರ್ಗನಕ್ಷೆಗಳನ್ನು ತಯಾರಿಸಿ, ಸದರಿ ಮಾರ್ಗನಕ್ಷೆಗಳ ದಿನಾಂಕವಾರು ಮಾಹಿತಿಯನ್ನು ತಾಲುಕು ಮಟ್ಟದ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರಿಗೆ/ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯಾಲಯಕ್ಕೆ ವರದಿ ಸಲ್ಲಿಸಬೇಕು. ಶಾಲೆಗಳಿಗೆ ಪೂರೈಕೆಯಾಗುವ ಹಾಲಿನ ಪುಡಿಯನ್ನು ನಿಗದಿತ ಸಮಯದಲ್ಲಿ ಪೂರೈಕೆ ಮಾಡಿ, ಮುಖ್ಯವಾಗಿ ಘಟಕದಲ್ಲಿ ಪ್ರತಿನಿತ್ಯ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಅವರು ಸೂಚನೆ ನೀಡಿದರು.
ಶಾಲೆಗಳಲ್ಲಿ ಫಲಾನುಭವಿಗಳ ಸಂಖ್ಯೆಗಳಿಗೆ ಅನುಗುಣವಾಗಿ ಹಾಲಿನ ಪೌಡರ್ ನ್ನು ಪೂರೈಕೆ ಮಾಡಿದ ಬಳಿಕ ಕಡ್ಡಾಯವಾಗಿ ಅದರ ಸದುಪಯೋಗ ಆಗಬೇಕು. ಬೇಡಿಕೆಯ ಪ್ರಮಾಣವನ್ನು ಆಯಾ ಶಾಲೆಗಳ ಮುಖ್ಯ ಗುರುಗಳಿಂದ ಫಲಾನುಭವಿಗಳ ಸಂಖ್ಯೆಗನುಗುಣವಾಗಿ ಬೇಡಿಕೆ ಪಡೆಯಬೇಕು. ಎಲ್ಲ ತಾಲೂಕುಗಳ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ದೃಢೀಕರಿಸಿ ಪ್ರತಿ ಮಾಹೆ ನಿಗದಿತ ಅವಧಿಯೊಳಗೆ ಹಾಲಿನ ಪೌಡರ್ ಬೇಡಿಕೆಯನ್ನು, ಜಿಲ್ಲಾ ಹಂತಕ್ಕೆ ಸಲ್ಲಿಸಲು ಕ್ರಮ ವಹಿಸಲು ಅಕ್ಷರ ದಾಸೋಹ ಶಾಖೆಯ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಕ್ಷೀರಭಾಗ್ಯ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅಪೌಷ್ಠಿಕತೆಯನ್ನು ಹೋಗಲಾಡಿಸುವಲ್ಲಿ ಜವಾಬ್ದಾರಿಯಿಂದ ನಿರ್ವಹಿಸಿ, ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಶ್ರಮವಹಿಸುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ-ಬಾಗಲಕೋಟ ಕರ್ನಾಟಕ ಹಾಲು ಒಕ್ಕೂಟ ಮಂಡಳಿ (ಕೆ.ಎಮ್.ಎಫ್ ಘಟಕ)ಯ ವ್ಯವಸ್ಥಾಪಕ ನಿರ್ದೇಶಕರಾದ ಡಿ. ಟಿ. ಶಿವಶಂಕರ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಡಾ.ವಿಜಯಕುಮಾರ ಆಜೂರ, ಜಿಲ್ಲಾ ಮಟ್ಟದ ಅಕ್ಷರ ದಾಸೋಹ ಶಾಖೆಯ ಶಿಕ್ಷಣಾಧಿಕಾರಿಗಳಾದ ಎಸ್. ಜೆ. ನಾಯಕ, ವಿಜಯಪುರ-ಬಾಗಲಕೋಟ ಕರ್ನಾಟಕ ಹಾಲು ಒಕ್ಕೂಟ ಮಂಡಳಿ(ಕೆ.ಎಮ್.ಎಫ್ ಘಟಕ)ವಿಜಯಪುರ ನ ವ್ಯವಸ್ಥಾಪಕರಾದ ಡಾ.ಗಜರಾಜ ರತ್ನೂರ, ನೊಡೆಲ್ ಅಧಿಕಾರಿಗಳಾದ ಹಣಮಂತಗೌಡ ಬಳಗಾನೂರ, ವಿಷಯನಿರ್ವಾಹಕರಾದ ಸಿದ್ದು ಪಾತ್ರೋಟ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.