Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನಿಗಾವಹಿಸಿ
(ರಾಜ್ಯ ) ಜಿಲ್ಲೆ

ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನಿಗಾವಹಿಸಿ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನಿಗಾವಹಿಸಿ, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಯೋಜನೆ ಸಿದ್ಧಪಡಿಸಿಕೊಂಡು ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಒತ್ತು ನೀಡಲು ಮುಂದಾಗುವಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್‌ಕುಮಾರ ಘೋಷ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶಾಲೆಯಿಂದ ಹೊರಗುಳಿಯಲು ಕಾರಣ ಪತ್ತೆ ಹಚ್ಚಿ ಸಂಬಂಧಿಸಿದ ಪಾಲಕರಿಗೆ ಮಕ್ಕಳ ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿಕೊಡುವ ಮೂಲಕ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವ ಸಾಮಾಜಿಕ ಕಾಳಜಿ ಹೊಂದಿ ಕಾರ್ಯ ನಿರ್ವಹಿಸುವಂತೆ ಅವರು ಹೇಳಿದರು.
ವಿವಿಧ ಇಲಾಖೆಯಲ್ಲಿ ಸಕಾಲದಲ್ಲಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಾಲಮಿತಿಯೊಳಗೆ ಇತ್ಯರ್ಥಪಡಿಸಿ ಬಾಕಿ ಉಳಿಯದಂತೆ ಕ್ರಮವಹಿಸಬೇಕು. ಕಂದಾಯ ಗ್ರಾಮಗಳ ಹಕ್ಕು ಪತ್ರ ವಿತರಣೆ ಹಾಗೂ ಖಾತಾಗಳಿಗೆ ತಾಲೂಕಿನ ಎಒ ಹಾಗೂ ತಹಶೀಲ್ದಾರರು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ತಾಲೂಕಾಡಳಿತ ಕಟ್ಟಡಕ್ಕೆ ಅವಶ್ಯ ಇರುವ ಜಾಗ ಗುರುತಿಸಿ ಜಾಗ ಲಭ್ಯತೆ ಮಾಹಿತಿ ವಿವರ ನೀಡಬೇಕು. ಬಿಸಿಊಟ ಸಮರ್ಪಕವಾಗಿ ಒದಗಿಸಬೇಕು. ನಿಯಮಾನುಸಾರ ಮೆನುವಿನಂತೆ ಇರುವಂತೆ ನೋಡಿಕೊಳ್ಳಬೇಕು ಆಹಾರ ಗುಣಮಟ್ಟದ ಬಗ್ಗೆ ಸಂಬಧಿಸಿದವರು ಪರಿಶೀಲನೆ ನಡೆಸಬೇಕು. ಅಂಗನವಾಡಿಗೆ ಹೊಸ ಕಟ್ಟಡದ ಬಗ್ಗೆ ಮಾಹಿತಿ ಪಡೆದುಕೊಂಡ ಅವರು ಈಗಾಗಲೇ ಹೊಸದಾಗಿ ಅಂಗನವಾಡಿ ಕಟ್ಟಡ ಅನುಮೋದನೆಗೊಂಡಿದ್ದು, ಯಾವುದೇ ಸಮಸ್ಯೆ ಇಲ್ಲದಿರುವುದನ್ನು ಪರಿಶೀಲಿಸಿಕೊಳ್ಳಬೇಕು. ಗಂಗಾಕಲ್ಯಾಣ ಯೋಜನೆಯಡಿ ಈಗಾಗಲೇ ಕೊರೆದ ಬೋರವೆಲ್‌ಗಳಿಗೆ ವಿದ್ಯುತ್ ಸಂಪರ್ಕವನ್ನು ಆದ್ಯತೆಯ ಮೇರೆಗೆ ನೀಡಬೇಕು. ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಉತ್ತಮವಾಗಿದೆ. ಜೆಜೆಎಂ ಯೋಜನೆಯ ನಿಗದಿತ ಅವಧಿಯಲ್ಲಿ ಪ್ರಗತಿ ಸಾಧಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರವೂ ಸೇರಿದಂತೆ ಸರ್ಕಾರಿ ಆಸ್ಪತೆಗಳಲ್ಲಿ ರೇಬಿಸ್ ಹಾಗೂ ಹಾವು ಕಡಿತ ಲಸಿಕೆಗಳನ್ನು ಸಾಕಷ್ಟು ದಾಸ್ತಾನು ಹೊಂದಬೇಕು. ಡಿಎಚ್‌ಒ ಅವರು ನಿರಂತರ ಮಾನಿಟರಿಂಗ್ ಮಾಡಬೇಕು ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಒಟ್ಟಾರೆ ಜಿಲ್ಲೆಯ ಅಭಿವೃದ್ಧಿಗಾಗಿ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಕೃಷಿ ಮಾರುಕಟ್ಟೆ ಇಲಾಖೆ, ಪಶುಸಂಗೋಪನಾ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ವಸತಿ ನಿಲಯಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಿ

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಪ್ರಥಮಾದ್ಯತೆ ಮೇಲೆ ಅರ್ಜಿ ಸ್ಥಿತಿಗತಿ ಪರಿಶೀಲಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಇತ್ಯರ್ಥಪಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸಿಕೊಡಬೇಕು. ಎಲ್ಲಾ ವಸತಿ ನಿಲಯಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ವ್ಯವಸ್ಥೆ ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕು. ತಾಲೂಕಿನ ಕಂದಾಯ ಇಲಾಖೆಯ ಇ-ಆಫೀಸ್ ಅಳವಡಿಸಿಕೊಳ್ಳಬೇಕು. ಉದ್ಭವಿಸುವ ತಾಂತ್ರಿಕ ಸಮಸ್ಯೆ ನೀಗಿಸಿಕೊಂಡು ಆದಷ್ಟು ಇ ಆಫೀಸ್ ಮೂಲಕ ಕಾರ್ಯನಿರ್ವಹಿಸುವಂತೆಯೂ, ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಇ-ಆಫೀಸ್ ಜನೆವರಿ ಮಾಹೆಯೊಳಗೆ ಅನುಷ್ಠಾನಕ್ಕೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಸೂಚನೆ ನೀಡಿದರು.

ಮಕ್ಕಳ ಆಧಾರ ದಾಖಲಾತಿಯಲ್ಲಿ ಪ್ರಗತಿ ಹೊಂದಬೇಕು

ಜಿಲ್ಲೆಯ ವಿವಿಧ ತಾಲೂಕಿನ ಬಿಇಒ ಅವರಿಂದ ಮಕ್ಕಳ ಆಧಾರ ಸೀಡಿಂಗ್ ಮಾಹಿತಿ ಪಡೆದುಕೊಂಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅವರು, ಮಕ್ಕಳ ಆಧಾರ ದಾಖಲಾತಿಯಲ್ಲಿ ಪ್ರಗತಿ ಹೊಂದಬೇಕು. ಅತ್ಯಂತ ಪ್ರಮುಖ ದಾಖಲೀಕರಣ ಕಾರ್ಯದಲ್ಲಿ ಯಾವುದೇ ನಿಲ್ಯಕ್ಷ್ಯ ವಹಿಸದೇ ಪ್ರಗತಿ ತೋರಬೇಕು. ಮಕ್ಕಳ ದಾಖಲಾತಿಯೊಂದಿಗೆ ಆಧಾರ ಸೀಡಿಂಗ್ ಪ್ರಗತಿಯನ್ನು ಹೆಚ್ಚಿಸಬೇಕು. ಶಾಲೆಯಲ್ಲಿ ಆಗಾಗ ನಡೆಯುವ ಶಿಕ್ಷಕ ಪಾಲಕರ ಸಭೆಯಲ್ಲಿ ಈ ಬಗ್ಗೆ ಪಾಲಕರಿಗೆ ಮಕ್ಕಳ ಭವ್ಯ ಭವಿತವ್ಯದ ದೃಷ್ಟಿಯಿಂದ ದಾಖಲೀಕರಣದ ಮಹತ್ವದ ಕುರಿತು ತಿಳಿಸಿಕೊಡುವ ಮೂಲಕ ಜಿಲ್ಲೆಯಲ್ಲಿ ಶೇಕಡಾ ಪ್ರತಿಶತ ಪ್ರಗತಿಗೆ ಶ್ರಮಿಸಿಬೇಕು. ಆಧಾರ ಮಾಹಿತಿ ಪಡೆದುಕೊಂಡು ಮಿಸ್‌ಮ್ಯಾಚ್ ತಾಂತ್ರಿಕ ಸಮಸ್ಯೆ ನಿವಾರಿಸಿಕೊಂಡು ಪರಿಹರಿಸಿಕೊಂಡು ದಾಖಲೆಗಳಲ್ಲಿ ವ್ಯತ್ಯಾಸವಾಗದಂತೆ ಕಾರ್ಯ ನಿರ್ವಹಿಸಬೇಕು ಯಾವುದೇ ಅಧಿಕಾರಿಗಳು ನಿರ್ಲಕ್ಷö್ಯ ವಹಿಸಬಾರದು. ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ದಾಖಲೀಕರಣಗೊಳಿಸುವಂತೆ ಅವರು ಸೂಚನೆ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.