Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಧ್ಯಮಗಳ ಪಾತ್ರ ಪರಮ ಪವಿತ್ರ :ಬಸವಲಿಂಗ ಸ್ವಾಮೀಜಿ
(ರಾಜ್ಯ ) ಜಿಲ್ಲೆ

ಮಾಧ್ಯಮಗಳ ಪಾತ್ರ ಪರಮ ಪವಿತ್ರ :ಬಸವಲಿಂಗ ಸ್ವಾಮೀಜಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿದ್ದೇಶ್ವರ ಶ್ರೀಗಳ ಗುರುನಮನ ಪ್ರಚಾರ ಸಮಿತಿ ಪೂರ್ವಭಾವಿ ಸಭೆ

ವಿಜಯಪುರ: ಹೂವಿನ ಪರಿಮಳವನ್ನು ಪರಿಸರಕ್ಕೆ ಹರಡುವ ವಾಯುವಿನಂತೆ ಸಮಾಜದಲ್ಲಿ ಸಚ್ಚಿಂತನೆಗಳನ್ನು ಬಿತ್ತರಿಸುವ ಮಾಧ್ಯಮಗಳ ಪಾತ್ರ ಪರಮ ಪವಿತ್ರ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಗುರುಗಳಾದ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದರು.
ಜ್ಞಾನಯೋಗಾಶ್ರಮದ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ೨ನೇ ವರ್ಷದ ಗುರುನಮನ ಕಾರ್ಯಕ್ರಮದ ಅಂಗವಾಗಿ ಬುಧವಾರ ಆಶ್ರಮದಲ್ಲಿ ಆಯೋಜಿಸಲಾಗಿದ್ದ ಪ್ರಚಾರ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀಗಳು, ಮಾಧ್ಯಮಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕೆಲಸ ಮಾಡುತ್ತಿವೆ ಎಂದರು.
ಶ್ರೀ ಸಿದ್ದೇಶ್ವರ ಸ್ವಾಮೀಜಿ ಮಾಧ್ಯಮಗಳ ಬಗ್ಗೆ ಅಪಾರ ನಂಬಿಕೆ ಇಟ್ಟಿದ್ದರು. ಪ್ರತಿದಿನ ಪತ್ರಿಕೆಗಳನ್ನು ಓದುವುದು ಅವರ ದಿನಚರಿಯ ಭಾಗವಾಗಿತ್ತು. ತಮ್ಮ ಕೊನೆಯ ದಿನಗಳಲ್ಲಿ ತಮ್ಮ ಆರೋಗ್ಯ ವಿಚಾರಿಸಲು ಬಂದಿದ್ದ ಮಾಧ್ಯಮಗಳ ಪ್ರತಿನಿಧಿಗಳ ಯೋಗಕ್ಷೇಮವನ್ನು ವಿಚಾರಿಸಿದ್ದ ಶ್ರೀಗಳು ಅವರಿಗೆಲ್ಲ ಹೋಳಿಗೆ ಪ್ರಸಾದ ಮಾಡಿಸಿದ್ದನ್ನು ಮೆಲುಕು ಹಾಕಿದರು.
ಪ್ರಸಕ್ತ ವರ್ಷದ ಗುರುನಮನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಮಾಧ್ಯಮಗಳ ಸಹಕಾರವೂ ಅಗತ್ಯ. ಸಾರ್ವಜನಿಕರಿಗೆ ಕಾಲ ಕಾಲಕ್ಕೆ ಇಲ್ಲಿನ ಕಾರ್ಯಕ್ರಮಗಳ ಬಗ್ಗೆ ಈ ಹಿಂದೆಯೂ ಅರ್ಥಪೂರ್ಣವಾಗಿ ನಿರ್ವಹಿಸುತ್ತ ಬಂದಿರುವ ಮಾಧ್ಯಮಗಳು ಈ ಬಾರಿ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.
ಜ್ಞಾನಯೋಗಾಶ್ರಮದ ಉಪಾಧ್ಯಕ್ಷ ಗುರುಗಳಾದ ಶ್ರೀ ಹರ್ಷಾನಂದ ಸ್ವಾಮೀಜಿ ಮಾತನಾಡಿ, ಈಗಾಗಲೇ ಗ್ರಾಮ ಗ್ರಾಮಗಳಲ್ಲಿ ಜ್ಞಾನದಾಸೋಹ ಕಾರ್ಯಕ್ರಮಗಳನ್ನು ಮಾಡಿ ಜನರಿಗೆ ಗುರುನಮನ ಕಾರ್ಯಕ್ರಮದ ಮಾಹಿತಿ ನೀಡಲಾಗಿದೆ. ಈಗ ವಿಜಯಪುರ ನಗರದ ವಿವಿಧ ಬಡಾವಣೆಗಳಲ್ಲಿ ಜ್ಞಾನದಾಸೋಹ ನಡೆಯುತ್ತಿದೆ. ಡಿ. ೨೫ ರಿಂದ ಜ. ೨ ರ ವರೆಗೆ ಆಶ್ರಮದಲ್ಲಿ ಗುರುನಮನ ಕಾರ್ಯಕ್ರಮದ ಅಂಗವಾಗಿ ನಾನಾ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸುಧಾರಿತ ಕೃಷಿ, e್ಞÁನಾರಾಧನೆ, ಗ್ರಾಮ ಸಂಸ್ಕೃತಿ, ಯೋಗ ಜೀವನ, ಮಾತೃಭಕ್ತಿ, ಜಾಗತಿಕ ತಾತ್ವಿಕ ಚಿಂತನೆಗಳು, ಸೇವಾಭಾವ ಹಾಗೂ ಗುರುದೇವರ ಬದುಕು ಎಂಬ ವಿಷಯವಾಗಿ ಗೋಷ್ಠಿಗಳು ನಡೆಯಲಿವೆ. ಜ.೧ ರಂದು ಗುರುದೇವರಿಗೆ ದೀಪನಮನ ಹಾಗೂ ಜ. ೨ ರಂದು ಪುಷ್ಪನಮನ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಹಿರಿಯ ಪತ್ರಕರ್ತ ವಾಸುದೇವ ಹೆರಕಲ್ಲ ಮಾತನಾಡಿ, ಜ್ಞಾನದಾಸೋಹಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಬಗ್ಗೆ ಮಾಧ್ಯಮಗಳಿಗೆ ಅಪಾರ ಶ್ರದ್ಧಾ ಭಕ್ತಿಯಿತ್ತು. ಅವರ ಪ್ರವಚನ ಸಾರಗಳನ್ನು ಪ್ರಕಟಿಸದ ಪತ್ರಿಕೆಗಳೇ ಇಲ್ಲ. ಗುರುನಮನ ಕಾರ್ಯಕ್ರಮವನ್ನು ಮಾಧ್ಯಮದವರು ಯಶಸ್ವಿಗೊಳಿಸಲು ಸಕಲ ಸಹಕಾರ ನೀಡುವರು. ಪ್ರಚಾರ ಸಮಿತಿಗೆ ಯಾವುದೇ ಅಧ್ಯಕ್ಷ, ಉಪಾಧ್ಯಕ್ಷರು, ಪದಾಧಿಕಾರಿಗಳಿರುವುದಿಲ್ಲ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಗಮೇಶ ಚೂರಿ ಸಂಯೋಜಕರಾಗಿ ಕಾರ್ಯನಿರ್ವಹಿಸುವರು ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಗಮೇಶ ಚೂರಿ ಮಾತನಾಡಿ, ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಗ್ರಾಂಥಿಕ ಭಾಷೆಯಲ್ಲಿ ಅತ್ಯಂತ ಸರಳವಾಗಿ ಪ್ರವಚನ ನೀಡುತ್ತಿದ್ದರು. ಅವರು ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರೂ ಮಾಧ್ಯಮಗಳಿಗೆ ಅವರ ಆಶೀರ್ವಚನವೇ ದೊಡ್ಡ ಸುದ್ದಿಯಾಗಿರುತ್ತಿತ್ತು. ಗುರುನಮನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ವಿಜಯಪುರದ ಎಲ್ಲ ಮಾಧ್ಯಮ ಬಂಧುಗಳು ಎಲ್ಲ ರೀತಿಯ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯಲ್ಲಿ ಶ್ರೀ ಶ್ರದ್ಧಾನಂದ ಸ್ವಾಮೀಜಿ, ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜೇಶ ದೇವಗಿರಿ, ವಿಡಿಎ ಮಾಜಿ ಅಧ್ಯಕ್ಷ ಮಿಲಿಂದ ಚಂಚಲಕರ, ವಿವಿಧ ಮಾಧ್ಯಮಗಳ ಪ್ರತಿನಿಧಿಗಳು, ಗುರುನಮನ ಕಾರ್ಯಕ್ರಮದ ವಿವಿಧ ಸಮಿತಿಗಳ ಪ್ರಮುಖರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.