ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಕಾರ್ತಿಕ ರಾಠೋಡ ಮತ್ತು ವಿಕಾಸ ಪಾಟೀಲ ಇವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯ ಕ್ರಿಕೆಟ ಆಯ್ಕೆ ಪ್ರಕ್ರಿಯೆಯಲ್ಲಿ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.
ಫೆಬ್ರುವರಿಯಲ್ಲಿ ಚೆನ್ನೈನಲ್ಲಿ ನಡೆಯುವ ದಕ್ಷಿಣ ವಿಭಾಗೀಯ ಪಂದ್ಯಾವಳಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಪ್ರತಿನಿಧಿಸುತ್ತಿದ್ದಾರೆ .ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಚಾರ್ಯ ಅಶೋಕ ಹೆಗಡೆ ಮತ್ತು ದೈಹಿಕ ನಿರ್ದೇಶಕ ಎಂ.ಎಂ.ಲಕ್ಷ್ಮಿಶ ಮತ್ತು ಕಾಲೇಜಿನ ಸಿಬ್ಬಂದಿ ಅಭಿನಂದಿಸಿದ್ದಾರೆ.

