Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»“ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರೆ :ಸಿಇಓ ಶಿಂಧೆ
(ರಾಜ್ಯ ) ಜಿಲ್ಲೆ

“ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರೆ :ಸಿಇಓ ಶಿಂಧೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಏ.30ರಂದು ಮತದಾನ ಜಾಗೃತಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ಕರೆ

ವಿಜಯಪುರ: ಏಪ್ರಿಲ್ 30 ರಂದು ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಜರುಗುವ “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮದಲ್ಲಿ ಎಲ್ಲರೂ ಅತ್ಯುತ್ಸಾಹದಿಂದ ಭಾಗವಹಿಸಿ, ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸುವುದರ ಜೊತೆಗೆ ಮತದಾರರಲ್ಲಿ ಮತದಾನ ಅರಿವು ಮೂಡಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ಕರೆ ನೀಡಿದರು.
ಶುಕ್ರವಾರ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಈಗಾಗಲೇ ಮುಖ್ಯ ಚುನಾವಣಾಧಿಕಾರಿಗಳು ಈ ಕಾರ್ಯಕ್ರಮ ರೂಪರೇಷಗಳ ಕುರಿತು ಮಾರ್ಗಸೂಚಿಯಲ್ಲಿ ತಿಳಿಸಿದಂತೆ ಎಲ್ಲರೂ ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಈ ಕಾರ್ಯಕ್ರಮವನ್ನು ಏಕಕಾಲಕ್ಕೆ ಹಮ್ಮಿಕೊಂಡಿದ್ದು, ಏಪ್ರಿಲ್ 30ರ ಬೆಳಿಗ್ಗೆ 8 ಗಂಟೆಯೊಳಗಾಗಿ ಸಂಬAಧಿಸಿದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ತೆರಳಿ ಪೂರ್ವ ಸಿದ್ಧತೆ ಕೈಗೊಂಡು ನಿಯಮಾನುಸಾರ ಕಾರ್ಯಕ್ರಮ ಆಯೋಜಿಸಲು ಕ್ರಮವಹಿಸಬೇಕು. ಮತಗಟ್ಟೆ ಹಂತದಲ್ಲಿ ಮತಗಟ್ಟೆ ಅಧಿಕಾರಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಮಟ್ಟದಲ್ಲಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮತದಾರರನ್ನು ಆಕರ್ಷಿಸಲು ಸ್ಥಳೀಯ ಜಾನಪದ- ಸಾಂಸ್ಕೃತಿಕ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ, ಸೈಕಲ್ ಜಾಥಾ, ಪ್ರಭಾತ ಪೇರಿಯಂತಹ ಜನಾಕರ್ಷಣೀಯ ವಿವಿಧ ಹಾಗೂ ವಿನೂತನ ಕಾರ್ಯಕ್ರಮಗಳು ಸೇರಿದಂತೆ ಚುನಾವಣಾ ವಿಷಯಯುಳ್ಳ ಕಾರ್ಯಕ್ರಮ ಆಯೋಜಿಸಿ ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ಸಿ-ವಿಜಿಲ್, ವೋಟರ್ ಹೆಲ್ಪ್ಲೈನ್, ಕೆ-ವೈಸಿ, ಚುನಾವಣಾ ‘ಸಕ್ಷಮಆಪ್’ ಹೆಚ್ಚಿನ ರೀತಿಯಲ್ಲಿ ಪ್ರಚಾರ ಮಾಡಬೇಕು ಮತ್ತು ಮತಗಟ್ಟೆಯ ಎಲ್ಲ ಸಿದ್ಧತೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.
ಜಿಲ್ಲೆಯ ಪ್ರತಿ ಮತಗಟ್ಟೆಯನ್ನು ಪರಿಚಯಿಸುವುದೇ ಈ ಕಾರ್ಯಕ್ರಮದ ಪ್ರಮುಖ ಉದ್ಧೇಶ. ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಭಾರತ ಚುನಾವಣಾ ಆಯೋಗ ಈ ಸಾಲಿನಲ್ಲಿ ಬಿಡುಗಡೆ ಮಾಡಿರುವ ಚುನಾವಣಾ ಗೀತೆಯನ್ನು ಹಾಗೂ 2018ರಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಬಿಡುಗಡೆಗೊಳಿಸಲಾದ ಚುನಾವಣಾ ಗೀತೆಗಳನ್ನು ಬಳಸುವಂತೆ ಅವರು ಸಲಹೆ ನೀಡಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಮಾತನಾಡಿ, ಏಪ್ರಿಲ-30 ರಂದು ಜರುಗುವ “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮವು ಅತೀ ಮಹತ್ವದ ಕಾರ್ಯಕ್ರಮವಾಗಿದೆ. ಎಲ್ಲ ಅಧಿಕಾರಿಗಳುಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಯಾವುದೇ ಅಡಚಣೆಯಾಗದಂತೆ, ಮುನ್ನೆಚ್ಚರಿಕೆಯಿಂದ ಬಹು ಯಶಸ್ವಿಯಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂದರು.
ಸಭೆಯಲ್ಲಿ ಎಲ್ಲ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು, ಕ್ಷೇತ್ರ ಶೀಕ್ಷಣಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜಿಲ್ಲಾ ಪಂಚಾಯತಿಯ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS ceo sinde dc danammanavar udaya rashmi
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.