ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಶಿಕ್ಷಣದ ಜೊತೆ, ಸಹಬಾಳ್ವೆ, ಸಂಸ್ಕಾರ, ಧೈರ್ಯ, ಅತ್ಯಗತ್ಯ, ಎಂದು ಯಡಿಯಾಪೂರ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಮೀರಾ ಪಿ, ಕುಲ್ಕರ್ಣಿ ಹೇಳಿದರು.
ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯಾದಗಿರಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಸುರಪುರ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ “ಮಿಷನ್ ಶಕ್ತಿ” ಯೋಜನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಸಮಗ್ರ ಸಬಲೀಕರಣ ಕಲ್ಪಿಸುವ ನಿಟ್ಟಿನಲ್ಲಿ, ಸರ್ಕಾರದ ವಿವಿಧ ಇಲಾಖೆಗಳು ಅರಿವು ಮೂಡಿಸುವ ಕಾರ್ಯ ಶ್ಲಾಘಿಸಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ ವರದಕ್ಷಿಣೆ ನಿಷೇಧ ಕಾಯ್ದೆ, ಕೌಟುಂಬಿಕ ದೌರ್ಜನ್ಯ, ಭ್ರೂಣ ಹತ್ಯೆ, ಲಿಂಗ ತಾರತಮ್ಯ ಖಂಡಿಸುತ್ತಾ, ನಮಗೆ ನಾವೇ ಮಾದರಿಯಾಗಿ ಬದುಕಬೇಕು, ಕೆಲಸ ನಿರ್ವಹಿಸುತ್ತಿರುವ ಮತ್ತು ಸಾರ್ವಜನಿಕ, ಸ್ಥಳಗಳಲ್ಲಿ ಮಹಿಳೆಗೆ ಆಗುವ ಅವಮಾನ, ಶೋಷಣೆಯಿಂದ ಹೊರ ಬರಲು ಮಾಹಿತಿ ತಂತ್ರಜ್ಞಾನ ಸದ್ಭಳಕೆ ಮಾಡಿಕೊಳ್ಳುವಂತೆ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.
ಡಿ ಡಿ ಕಛೇರಿಯ ಸಮಾಲೋಚಕರಾದ ಶ್ವೇತ ಪ್ರಾಸ್ತಾವಿಕ ಮಾತನಾಡಿದರು. ವಲಯ ಮೇಲ್ವಿಚಾರಕಿ ಶಾಂತಾ ಯಡ್ರಾಮಿ, ಹಣಕಾಸು ನಿರ್ವಹಣಾಧಿಕಾರಿ ಮಹಾದೇವಪ್ಪ, ಉಪನ್ಯಾಸಕರಾದ ಮಲ್ಲಿಕಾರ್ಜುನ ಮರಡ್ಡಿ, ನಸ್ರೀನ್ ತಾಜ್, ಸುಮಾ ಎಚ್ಚ್, ಮಾತನಾಡಿದರು.
ಡಾ ಬಸಮ್ಮ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಡಾ ಯಂಕನಗೌಡ ಎಸ್ ಪಾಟೀಲ, ಡಾ ಸುರೇಶ ಪಾಟೀಲ, ಪವನ ಕುಲ್ಕರ್ಣಿ, ಮಲ್ಲಿಕಾರ್ಜುನ ಕಲಾಲ್, ಮರಿಸ್ವಾಮಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

