ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಅಲೆಮಾರಿ, ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳ ನೋಂದಾಯಿತ ಸಂಘ-ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಜಿ ಅವರ ಅಧ್ಯಕ್ಷೆತಯಲ್ಲಿ ಡಿಸೆಂಬರ್ ೨೯ರಂದು ಸಮಾಲೋಚನಾ ಸಭೆ ಆಯೋಜಿಸಲಾಗಿದೆ.
ಈ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವವರು ೮೬೬೦೭೨೯೮೪೮ ವ್ಯಾಟ್ಸಾಫ್ ಸಂಖ್ಯೆಗೆ ಅಥವಾ md.scstndc@gmail.com or scstntdntcell@gmail.com ಇಮೇಲ್ ಮೂಲಕ ಭಾಗವಹಿಸುವಿಕೆಯನ್ನು ಡಿಸೆಂಬರ್ ೨೪ರೊಳಗಾಗಿ ದಾಖಲಿಸುವಂತೆಯೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಇವರ ಕಚೇರಿಯನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
