ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಾಜಶೇಖರ ಅವಜಿ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ ರವರ ಸಮ್ಮುಖದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಥಮ ಸಭೆ ಗುರುವಾರ ಜರುಗಿತು.
ಅಧ್ಯಕ್ಷರು ನವೆಂಬರ್ ತಿಂಗಳ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಇಓ ಬಾಬು ರಾಠೋಡ ಮಾತನಾಡಿ, ಸರ್ಕಾರ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಗೆ ತಲುಪಿದಾಗ ಮಾತ್ರ ಯೋಜನೆಗಳ ಸಾರ್ಥಕತೆಯಾಗುವುದು. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಯೋಜನೆಗಳ ಅನುಷ್ಠಾನಕ್ಕಾಗಿ ಗುರಿ ಸಾಧಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಗ್ರಾಮೀಣ ಮತ್ತು ನಗರ, ಆಹಾರ ನಿರೀಕ್ಷಕರು, ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕರು, ಹೆಸ್ಕಾಂ ಅಧಿಕಾರಿಗಳು, ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿಗಳು, ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.
ತಾಲೂಕ ಪಂಚಾಯತಿಯ ಯೋಜನಾಧಿಕಾರಿ ಎಸ್ ಎಸ್ ಅಳ್ಳಗಿ ಸ್ವಾಗತಿಸಿದರು. ಕು.ರವಿ ಗೆದಪ್ಪನವರ ವಂದಿಸಿದರು. ತಾಲೂಕು ಐಇಸಿ ಸಂಯೋಜಕ ರಾಘವೇಂದ್ರ ಭಜಂತ್ರಿ ಇದ್ದರು.

