ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ಹಗುರವಾಗಿ ಮಾತನಾಡಿದ ಕ್ರಮ ಖಂಡಿಸಿ ತಾಲ್ಲೂಕು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಶಿರಸ್ತೇದಾರ ಸುರೇಶ ಮ್ಯಾಗೇರಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಚೇರಿ ಆವರಣಕ್ಕೆ ಶುಕ್ರವಾರ ಆಗಮಿಸಿದ ತಾಲ್ಲೂಕು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ಮಾತನಾಡಿದ ಮಾತುಗಳನ್ನು ಖಂಡಿಸಿದರು.
ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಹುಯೋಗಿ ತಳ್ಳೋಳ್ಳಿ, ಪ್ರಭು ಅಂಬಲಗಿ ಮಾತನಾಡಿ, ಅಂಬೇಡ್ಕರ್ ಈ ದೇಶದ ಶೋಷಿತ ಸಮುದಾಯಗಳ ರಾಜಕೀಯ, ಸಾಮಾಜಿಕ, ಸ್ವಾತಂತ್ರö್ಯ, ಸಮಾನತೆಯ ಧ್ವನಿಯಾಗಿದ್ದಾರೆ. ಅವರ ಕುರಿತು ಮಾತನಾಡಿದ ಅಮಿತ ಶಾ ಕೂಡಲೇ ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಪಟ್ಟಣ ಪಂಚಾಯಿತಿ ಸದಸ್ಯ ಉಮೇಶ ರೂಗಿ, ಬಸವರಾಜ ತಳಕೇರಿ, ಶಿವಾನಂದ ಇಂಗಳಗಿ, ಕಮಲಸಾಬ್ ಕಾಟಮನಳ್ಳಿ, ಸಾಯಬಣ್ಣ ದಳಪತಿ, ಪ್ರಶಾಂತ ದೊಡಮನಿ, ಸಿದ್ಧಾರ್ಥ ತಳಕೇರಿ, ಜಾನು ಗುಡಿಮನಿ, ರಾಘವೇಂದ್ರ ತಳವಾರ ಇದ್ದರು.