ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಅಪರಾಧಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, ಅಪರಾಧಗಳು ಆಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ಅಪರಾಧ ತಡೆ ಮಾಸಾಚರಣೆ ಪ್ರತಿ ವರ್ಷ ಡಿಸೆಂಬರ್ ಮಾಹೆಯನ್ನು ಅಪರಾಧ ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತದೆ ಎಂದು ಪಿಎಸ್‌ಐ ಆರೀಫ ಮುಷಾಪುರಿ ಹೇಳಿದರು.
ಪುಟ್ಟಣದ ಆರ್.ಡಿ. ಪಾಟೀಲ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪಪೂರ ಮಹಾವಿದ್ಯಾಲಯ ಹಾಗೂ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ ಘಟಕದ ಅಡಿಯಲ್ಲಿ ಸಿಂದಗಿ ಪೊಲೀಸ್ ಠಾಣೆಯ ಸಹಯೋಗದಲ್ಲಿ ಹಮ್ಮಿಕೊಂಡ ೨೦೨೪ರ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಕೇವಲ ಪೊಲೀಸರಿಂದ ಅಪರಾಧಗಳ ತಡೆ ಸಾಧ್ಯವಿಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರವೂ ಮುಖ್ಯ. ಅಪರಾಧಗಳಾಗದಂತೆ ವಹಿಸಬಹುದಾದ ಮುನ್ನೆಚ್ಚರಿಕೆ ಕ್ರಮಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಇತ್ತೀಚಿನ ದಿನಮಾನಗಳಲ್ಲಿ ಸಾಮಾನ್ಯವಾಗಿ ಅಂತರ್ಜಾಲ ವಂಚನೆ ಪ್ರಕರಣಗಳು ನಡೆಯುತ್ತಿವೆ ಅವುಗಳಿಂದ ಎಚ್ಚರಿಕೆಯಿಂದ ಇರಬೇಕು. ತಡೆಗಟ್ಟಲು ಪಾಲಿಸಬೇಕಾದ ಕಾನೂನುಗಳ ಬಗ್ಗೆ ಅರಿವು ಇರಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ವಿ. ಮಹಲಿನಮಠ ವಹಿಸಿ ಮಾತನಾಡಿದರು.
ಈ ವೇಳೆ ಐಕ್ಯೂಎಸಿ ಸಂಯೋಜಕ ಬಸವರಾಜ ಮಹಾಜನಶೆಟ್ಟಿ, ಉಪನ್ಯಾಸಕ ಡಾ.ಶರಣಬಸವ ಜೋಗುರ ಸೇರಿದಂತೆ ಎರಡು ಮಹಾವಿದ್ಯಾಲಯಗಳ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.