ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಎಂಸಿಎ ಕೋರ್ಸ್ಗೆ ಹಂಚಿಕೆಯಾಗಿ ಬಾಕಿ ಉಳಿದ ಸೀಟುಗಳಿಗಾಗಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದಲ್ಲಿ ಎಂಸಿಎ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಈ (ಡಿಸೆಂಬರ್) ತಿಂಗಳ ೩೧ರ ವರೆಗೆ ಯುಯುಸಿಎಂಎಸ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.kswu.ac.inಇಂದ ಅಥವಾ ವಿವಿಯ ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಅಜೀಜ ಮಂಕಾದಾರ ದೂರವಾಣಿ ಸಂಖ್ಯೆ: ೯೮೪೫೦೫೧೦೯೭, ೯೯೦೨೯೯೬೯೫೯ ಸಂಪರ್ಕಿಸಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.