ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮೌಲಾಲಿ ಆಲಗೂರ, ಬಸವ ಭೂಷಣ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬಸವನ ಬಾಗೇವಾಡಿಯ ಬಸವ ಜನ್ಮ ಪ್ರತಿಷ್ಠಾನ, ಜಿಲ್ಲಾ ಘಟಕ ವಿಜಯಪುರ ಇವರು ಕೊಡಮಾಡುವ ಈ ಪ್ರಶಸ್ತಿಯನ್ನು ಇದೆ ತಿಂಗಳ ಡಿ.೨೫ರಂದು ವಿಜಯಪುರದ ಚೇತನಾ ಕಾಲೇಜ ಸಭಾಂಗಣದಲ್ಲಿ ಜರುಗಲಿರುವ ರಾಜ್ಯ ಮಟ್ಟದ ವಚನ ವೈಭವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೌಲಾಲಿ ಆಲಗೂರ ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಸ್ಥೆಯ ಸಂಚಾಲಕ ಮುರಗೇಶ ಸಂಗಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.