ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಸವ ಜನ್ಮಭೂಮಿ ಪ್ರತಿಷ್ಠಾನದ ೧೪ನೇ ವಾರ್ಷಿಕೋತ್ಸವ ಹಾಗೂ ರಾಜ್ಯಮಟ್ಟದ ವಚನವೈಭವ ನಿಮಿತ್ತ ಕೊಡಮಾಡುವ ರಾಷ್ಟ್ರಮಟ್ಟದ ಬಸವವಿಭೂಷಣ ಹಾಗೂ ರಾಜ್ಯಮಟ್ಟದ ಬಸವಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ಡಿ.೨೫ ರಂದು ಬೆಳಗ್ಗೆ ೧೧-೦೦ ಚೇತನಾ ಕಾಲೇಜ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶಶ್ರೀ ಪಾವನ ಸಾನಿಧ್ಯ ವಹಿಸಲಿದ್ದು, ಚೇತನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಜುಗತಿ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ಸಾಹಿತಿ, ಋತುಸೌರಭ ಫೌಂಡೇಶನ ಅಧ್ಯಕ್ಷೆ ವಿಜಯಲಕ್ಷ್ಮಿ ಸತ್ಯಮೂರ್ತಿ ಉದ್ಘಾಟಿಸುವರು.
ಚಿತ್ರದುರ್ಗ ಸಾಹಿತಿ ಶೈಲಾ ಜಯಕುಮಾರ, ಯಾದಗಿರಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಜಯಪ್ರಕಾಶ ಎಚ್., ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೆಡಶ್ಯಾಳ ಹಾಗೂ ಸಾಹಿತಿ ಶಂಕರ ಬೈಚಬಾಳ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಈ ಸಂದರ್ಭದಲ್ಲಿ ನಾಡಿನ ೨೪ ಸಾಧಕರಿಗೆ ರಾಷ್ಟ್ರ ಹಾಗೂ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕ, ಸಾಹಿತಿ ಮುರುಗೇಶ ಸಂಗಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.