Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೈದ್ಯಕೀಯ & ಉತ್ಪಾದನೆ ಕ್ಷೇತ್ರದಲ್ಲಿ ವಿಶ್ವದ ಹಬ್ ಆಗಲಿರುವ ಬಾರತ
(ರಾಜ್ಯ ) ಜಿಲ್ಲೆ

ವೈದ್ಯಕೀಯ & ಉತ್ಪಾದನೆ ಕ್ಷೇತ್ರದಲ್ಲಿ ವಿಶ್ವದ ಹಬ್ ಆಗಲಿರುವ ಬಾರತ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತ ಶೀಘ್ರದಲ್ಲಿ ವೈದ್ಯಕೀಯ ಮತ್ತು ಉತ್ಪಾದನೆ ಕ್ಷೇತ್ರಗಳಲ್ಲಿ ಜಗತ್ತಿನ ಹಬ್ ಆಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಅವರು ಭಾಷಣ ಮಾಡಿದರು.
ಭಾರತದಲ್ಲಿ ಹೇರಳವಾದ ಪ್ರಾಕೃತಿಕ ಮತ್ತು ಮಾನವ ಸಂಪನ್ಮೂಲವಿದೆ. ಪ್ರಾಚೀನ ಭಾರತದ ಆರ್ಯಭಟರಿಂದ ಹಿಡಿದು ಶಲ್ಯರ ವರೆಗೆ ಮತ್ತು ಇಂದಿನ ಯುವ ವೃತ್ತಿಪರ, ಪ್ರಾಮಾಣಿಕ ಮತ್ತು ಕೌಶಲ್ಯಯುತ ಯುವಕರು ದೇಶದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿದ್ದಾರೆ. ನಮ್ಮ ದೇಶದಲ್ಲಿ ಮೂಲಭೂತ ಸೌಕರ್ಯಗಳು ಹೆಚ್ಚಾಗುತ್ತಿರುವ ಪರಿಣಾಮ ಇಲ್ಲಿಗೆ ಹೂಡಿಕೆ ಮಾಡಲು ವಿದೇಶಿಗರೂ ಉಳಿದ ದೇಶಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಭಾರತ ಈಗ ಪ್ರತಿಯೊಂದು ಕ್ಷೇತ್ರಗಳಲ್ಲಿ ಅಭಿವೃದ್ಧಿಯಾಗುತ್ತಿದ್ದು, ಜಗತ್ತಿಗೆ ನಾನಾ ವಸ್ತುಗಳನ್ನು ಸರಬರಾಜು ಮಾಡುವಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿರುವ ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇವೆಗಳು, ಹೂಡಿಕೆಗಳಿಗೆ ಇರುವ ಅವಕಾಶಗಳನ್ನು ವಿದೇಶಿಗರನ್ನು ಆಕರ್ಷಿಸುತ್ತಿದ್ದು, ಶೀಘ್ರದಲ್ಲಿ ಭಾರತ ಜಗತ್ತಿನ ವೈದ್ಯಕೀಯ ಮತ್ತು ಉತ್ಪಾದನೆ ಕ್ಷೇತ್ರಗಳ ಹಬ್ ಆಗಲಿದೆ ಎಂದು ಅವರು ಹೇಳಿದರು.
ಈ ಘಟಿಕೋತ್ಸವದಲ್ಲಿ ಅಮೇರಿಕಾದ ಟೆಕ್ಸಾಸ್ ನಲ್ಲಿ ಏಕಸ್ ಸ್ಪ್ರಿಂಗ್ ಸಂಸ್ಥೆಯ ಮುಖ್ಯಸ್ಥ ಮತ್ತು ಸಿಇಓ ಆಗಿರುವ ಅರವಿಂದ ಮೆಳ್ಳಿಗೇರಿ ಮತ್ತು ಬೆಂಗಳೂರಿನ ಕಿರ್ಕೊಸ್ಕರ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಮುಖ್ಯಸ್ಥೆ ಮತ್ತು ಸಿಇಓ ಆಗಿರುವ ಗೀತಾಂಜಲಿ ಕಿರ್ಲೊಸ್ಕರ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ವಿಜಯಪುರ ನಗರದ ಶುಭಂ ಹಿಮಾಂಶು ಶಹಾ ಆರು ಚಿನ್ನದ ಪದಕ ಮತ್ತು ದೆಹಲಿಯ ಇಶಾ ಶೈಲೇಂದ್ರ ದೀಕ್ಷಿತ ಅವರಿಗೆ 5 ಚಿನ್ನದ ಪದಕ ಮತ್ತು ಎರಡು ನಗದು ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ರಜಿಸ್ಚ್ರಾರ್ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ನಾನಾ ವಿಭಾಗಗಳ ಡಾ. ತೇಜಸ್ವಿನಿ ವಲ್ಲಭ, ಡಾ. ಎಸ್. ವಿ. ಪಾಟೀಲ, ಡಾ. ಚಂದ್ರಿಕಾ ದೊಡ್ಡಿಹಾಳ, ಡಾ. ಎಸ್. ಎಸ್. ದೇವರಮನಿ, ಡಾ. ಮಲ್ಲಪ್ಪ ಹುಗ್ಗಿ ಮುಂತಾದವರು ಉಪಸ್ಥಿತರಿದ್ದರು.

“ಉತ್ತರ ಕರ್ನಾಟಕದಲ್ಲಿ ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆಯಯನ್ನು ಕಟ್ಟಿದ ಫ. ಗು. ಹಳಕಟ್ಟಿ, ಬಂಥನಾಳ ಶ್ರೀಗಳು, ಶ್ರೀ ಬಿ. ಎಂ. ಪಾಟೀಲರು ಮತ್ತು ಈಗ ಅಧ್ಯಕ್ಷರಾಗಿರುವ ಎಂ. ಬಿ.ಪಾಟೀಲರು ಈ ಭಾಗದಲ್ಲಿ ಶಿಕ್ಷಣ ಕ್ರಾಂತಿ ಮಾಡಿದ್ದಾರೆ. ಸಚಿವ ಎಂ. ಬಿ. ಪಾಟೀಲ ಅವರ ಕೆಲಸ ಕಾರ್ಯಗಳು ಜನಮೆಚ್ಚುಗೆಗೆ ಪಾತ್ರವಾಗಿವೆ. ಅಲ್ಲದೇ, ಈ ಶಿಕ್ಷಣ ಸಂಸ್ಥೆಯಲ್ಲಿ ಓದಿರುವ ಜನ ನಾನಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಲು ಅವರು ಕಾರಣರಾಗಿದ್ದಾರೆ. ಮುಂಬರುವ ದಿನಗಳಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ವಿಶ್ವದ ಶ್ರೇಷ್ಠ ವಿದ್ಯಾಲಯಗಳಲ್ಲಿ ಒಂದಾಗಲಿದೆ. ಇಲ್ಲಿನ ಕ್ರೀಡಾಪಟುಗಳು ಓಲಂಪಿಕ್ಸ್ ನಲ್ಲಿ ಪ್ರತಿನಿಧಿಸಿ ಬಸವನಾಡಿನ ಹೆಮ್ಮೆಯ ಕೀರ್ತಿಯನ್ನು ಬೆಳಗುವಂತಾಗಲಿ.”

– ಪ್ರಹ್ಲಾದ ಜೋಶಿ
ಕೇಂದ್ರ ಇಂಧನ ಸಚಿವರು

ಚಿನ್ನದ ಪದಕ ಪಡೆದ ಬಸವನಾಡಿನ ಪ್ರತಿಭೆಗಳು

ವಿಜಯಪುರ: ಆರು ಚಿನ್ನದ ಪದಕ ಪಡೆದ ಬಸವನಾಡಿನ ಯುವಕ, ಐದು ಚಿನ್ನದ ಪದಕ ಮತ್ತು ಎರಡು ನಗದು ಪುರಸ್ಕಾರ ಪಡೆದ ದೆಹಲಿಯ ವೈದ್ಯ ದಂಪತಿಯ ಪುತ್ರಿ. ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದಲ್ಲಿ ಇಬ್ಬರು ಯುವ ವೈದ್ಯರು ಈ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಶನಿವಾರ ನಡೆದ ಘಟಿಕೋತ್ಸವದಲ್ಲಿ ವಿಜಯಪುರ ನಗರದ ಉದ್ಯಮಿ ಪುತ್ರ ಶುಭಂ ಹಿಮಾಂಶು ಶಹಾ ಆರು ಚಿನ್ನದ ಪದಕ ಪಡೆದರೆ, ದೆಹಲಿಯ ವೈದ್ಯ ದಂಪತಿಯ ಪುತ್ರಿ ಇಶಾ ಶೈಲೇಂದ್ರ ದೀಕ್ಷಿತ ಐದು ಚಿನ್ನದ ಪದಕ ಮತ್ತು ಎರಡು ನಗದು ಪ್ರಶಸ್ತಿ ಬಾಚಿಕೊಳ್ಳುವ ಮೂಲಕ ಇದರರಿಗೆ ಸ್ಪೂರ್ತಿಯಾಗಿದ್ದಾರೆ.
ತಮ್ಮ ಸಾಧನೆ ಕುರಿತು ಸಂತಸ ವ್ಯಕ್ತಪಡಿಸಿದ ಬಸವನಾಡು ವಿಜಯಪುರ ನಗರದ ಶುಭಂ ಹಿಮಾಂಶು ಶಹಾ ಸಂತಸ ವ್ಯಕ್ತಪಡಿಸಿದ್ದಾರೆ.
“ಒಂದರಿಂದ 10ನೇ ತರಗತಿಯವರೆಗೆ ಸಂಗನ ಬಸವ ಇಂಟರನ್ಯಾಷನಲ್ ಸ್ಕೂಲ್ ನಲ್ಲಿ ನಂತರ ಮಹೇಶ ಪಿಯು ಕಾಲೇಜಿನಲ್ಲಿ ಪಿಯುಸಿ ಓದಿದೆ. ಎಂ.ಬಿ.ಬಿ.ಎಸ್ ಗಾಗಿ ಶ್ರೀ ಬಿ. ಎಂ.ಪಾಟೀಲ ವೈದ್ಯಕೀಯ ಕಾಲೇಜು ಸೇರಿದೆ. ಆರಂಭದಲ್ಲಿ ಸಾಧನೆ ಮಾಡಬಹುದು ಎಂದುಕೊಂಡಿದ್ದೆ. ಆದರೆ, ಚಿನ್ನದ ಪದಕ ನಿರೀಕ್ಷಿಸಿರಲಿಲ್ಲ. ನನ್ನ ಈ ಸಾಧನೆಗೆ ತಂದೆ ಹಿಮಾಂಶು ಮತ್ತು ತಾಯಿ ದೀಪಾ ಬೆನ್ನೆಲುಬಾಗಿ ನಿಂತಿದ್ದಾರೆ. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಎಲ್ಲ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಸಂಪೂರ್ಣ ಸಹಕಾರ ನೀಡಿದ್ದಾರೆ. ಮೊದಲ ಎರಡು ವರ್ಷ ನಾನು ಉತ್ತಮ ಸಾಧನೆ ಮಾಡಬಹುದು ಎಂದುಕೊಂಡಿರಲಿಲ್ಲ. ಆದರೆ, ನಂತರ ನನಗೆ ಸಿಕ್ಕ ಶಿಕ್ಷಕರ ಮಾರ್ಗದರ್ಶನ ಮತ್ತು ಸಹಕಾರದಿಂದ ನನ್ನಲ್ಲಿ ವಿಶ್ವಾಸ ಬಂತು. ಈಗ ತುಂಬಾ ಸಂತಸವಾಗಿದೆ. ಮುಂದೆ ಬೆಳಗಾವಿಯಲ್ಲಿ ರೆಡಿಯಾಲಜಿ ವಿಭಾಗದಲ್ಲಿ ಎಂ.ಡಿ ಮಾಡುವ ಗುರಿ ಹೊಂದಿದ್ದೇನೆ” ಎಂದು ಸಂತಸ ಹಂಚಿಕೊಂಡರು.
ದೆಹಲಿಯ ಇಶಾ ಶೈಲೇಂದ್ರ ದೀಕ್ಷಿತ್ ಮಾತನಾಡಿ, ನಾನು 1 ರಿಂದ 6ನೇ ತರಗತಿಯವರೆಗೆ ಪಂಜಾಬಿನ ಅಮೃತಸರದಲ್ಲಿ ಓದಿದ್ದೇನೆ. ನಂತರ ಪಿಯುಸಿ ವರೆಗೆ ದೆಹಲಿಯಲ್ಲಿ ಓದಿ, ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಸೇರಿದೆ. ಓದು ಮುಗಿಸಿ ಆರು ತಿಂಗಳ ನಂತರ ಈಗ ಪದವಿ ಪಡೆಯಲು ಬಂದಿದ್ದೇನೆ. ನನ್ನ ತಂದೆ ಡಾ. ಶೈಲೇಂದ್ರ ದೀಕ್ಷಿತ ಫಿಜಿಶಿಯನ್ ಆಗಿದ್ದು, ತಾಯಿ ಡಾ. ಪ್ರೀತಿ ಶರ್ಮಾ ಜನರಲ್ ಪ್ರ್ಯಾಕ್ಟಿಶನರ್ ಆಗಿದ್ದಾರೆ. ನನಗೆ ಓರ್ವ ತಂಗಿಯಿದ್ದು, ಎಂಜಿನಿಯರಿಂಗ್ ಓದುತ್ತಿದ್ದಾಳೆ. ನಾನು ಮುಂದೆ ರೆಡಿಯಾಲಜಿ ವಿಭಾಗದಲ್ಲಿ ಎಂ. ಡಿ. ಓದುವ ಬಯಕೆ ಹೊಂದಿದ್ದೇನೆ. ಈ ಪದಕ ಮತ್ತು ಪ್ರಶಸ್ತಿ ನಿರೀಕ್ಷಿಸಿಲಿಲ್ಲ. ಆದರೆ, ಕಷ್ಟಪಟ್ಟು ಓದಿದರೆ ಉತ್ತಮ ಸಾಧನೆ ಮಾಡಬಹುದು ಎಂದುಕೊಂಡಿದೆ. ಅದು ಫಲ ನೀಡಿದೆ ಎಂದು ಸಂತಸ ಹಂಚಿಕೊಂಡರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.