ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಡಿ.೨೨ ರಂದು ಬೆಳಿಗ್ಗೆ ೬ ಗಂಟೆಗೆ ವೃಕ್ಷೋತ್ಥಾನ ಪಾರಂಪರಿಕ ಓಟ-೨೦೨೪ರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ನಡೆಯುವ ಕಾರ್ಯಕ್ರಮಕ್ಕೆ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಓಟಕ್ಕೆ ಚಾಲನೆ ಹಾಗೂ ಹಸಿರು ನಿಶಾನೆ ತೋರುವರು.
ರವಿವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರುಗುವ ವೃಕ್ಷಥಾನ್ ಸಮಾರಂಭವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸೇರಿದಂತೆ ಸಂಸದರು, ಶಾಸಕರು ಪಾಲ್ಗೊಳ್ಳಲಿದ್ದಾರೆ.