ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬೆಳಗಾವಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಭಾರತೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿ. 27, ಶುಕ್ರವಾರ ರಂದು ಬೆಳಗಾವಿಯಲ್ಲಿ ನಡೆಯಲಿರುವ “ಬೃಹತ್ ಕಾಂಗ್ರೆಸ್ ಸಮಾವೇಶ” ದಲ್ಲಿ ಪಾಲ್ಗೊಳ್ಳಲು ಬಬಲೇಶ್ವರ ವಿಧಾನಸಭಾ ಕ್ಷೇತ್ರದ 5 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು, ರೈತರು ಭಾಗವಹಿಸಲಿದ್ದಾರೆ.
ಬೆಳಗಾವಿಯ ಕ್ಲಬ್ ರಸ್ತೆಯ ಸಿ.ಪಿ.ಎಡ್ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ವಿಜಯಪುರ ಜಿಲ್ಲೆಯ ಬಬಲೇಶ್ವರ ಹಾಗೂ ತಿಕೋಟಾ ತಾಲೂಕುಗಳ ಪ್ರತಿ ಗ್ರಾಮಗಳಿಂದ ಯುವಕರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಕೋಟಾ-ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದುಗೌಡನವರ ಹಾಗೂ ಈರಗೊಂಡ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
