ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ನಿವಾಸಿಗಳು ಮನೆಗಳನ್ನು ಬೀಗ ಹಾಕಿ ಬೇರೆಡೆಗೆ ಹೋಗುವಾಗ ಪೊಲೀಸ್ ಠಾಣೆಗೆ ಲಿಖಿತ ಪತ್ರದೊಂದಿಗೆ ಮಾಹಿತಿ ನೀಡಬೇಕು. ಇಲ್ಲವಾದರೆ ಗೃಹ ರಕ್ಷಕ ತಂತ್ರಾಂಶದಲ್ಲಿ ನಿಮ್ಮ ಮನೆಯಿರುವ ಸ್ಥಳದ ಮಾಹಿತಿಯನ್ನು ಸೇರ್ಪಡೆ ಮಾಡಬೇಕು ಎಂದು ಪಿಎಸ್‌ಐ ಆರೀಫ ಮುಷಾಪುರಿ ಹೇಳಿದರು.
ಪಟ್ಟಣದ ಎಚ್. ಜಿ.ಪದವಿ ಪೂರ್ವ ವಿದ್ಯಾಲಯದಲ್ಲಿ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಸಿಂದಗಿ ಪೋಲಿಸ ಠಾಣೆ ಇವುಗಳ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪೊಲೀಸ್ ಗಸ್ತು ನೀಡಲಾಗುವುದು. ದ್ವಿಚಕ್ರ ವಾಹನಗಳನ್ನು ಚಲಾಯಿಸುವಾಗ ಸವಾರರು ತಪ್ಪದೇ ಹೆಲ್ಮೆಟ್ ಧರಿಸಿ. ನಾಲ್ಕು ಚಕ್ರ ವಾಹನಗಳನ್ನು ಚಲಾಯಿಸುವ ಸವಾರರು ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು. ಇದರಿಂದ ಅಪಘಾತ ಸಂಭವಿಸಿದಾಗ ಜೀವಕ್ಕೆ ಅಪಾಯ ಕಡಿಮೆ ಯಾಗುತ್ತದೆ. ಸಮಾಜದ ರಕ್ಷಣೆಗೆ ಪೊಲೀಸ್ ಇಲಾಖೆ ಸದಾ ಸನ್ನದ್ಧವಾಗಿದೆ. ವಿದ್ಯಾರ್ಥಿಗಳು ತಮ್ಮ ಶಾಲಾ-ಕಾಲೇಜುಗಳ ಬಳಿ ಯಾರಾದರೂ ಅಪರಿಚಿತರು ಕಂಡುಬಂದ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು. ಬಲವಂತವಾಗಿ ಮಾತನಾಡಲು ಯತ್ನಿಸಿದರೆ ಕೂಡಲೇ ನಿಮ್ಮ ಶಿಕ್ಷಕರಿಗೆ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಚಾರ್ಯ ಎ. ಆರ್. ಹೆಗ್ಗನದೊಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆ ಮೇಲೆ ಉಪನ್ಯಾಸಕರಾದ ಎಸ್.ಎ. ಪಾಟೀಲ, ಆರ್. ಬಿ. ಹೊಸಮನಿ ಇದ್ದರು.
ಉಪನ್ಯಾಸಕ ಸಿದ್ದಲಿಂಗ ಕಿಣಗಿ ನಿರೂಪಿಸಿ, ವಂದಿಸಿದರು.

