ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಭಾರತ ಸರ್ಕಾರದ ಅಧೀನ ಸಂಸ್ಥೆಯಾದ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆರ್ಥಿಕ ಮತ್ತು ಅಭಿವೃದ್ಧಿ ಕಾಪೋರೇಷನ್ ವತಿಯಿಂದ ಡಿಸೆಂಬರ್ ೨೩ರಿಂದ ಡಿಸೆಂಬರ್ ೨೭ರವರೆಗೆ ಮ್ಯಾನುವೇಲ್ ಸ್ಕ್ಯಾವೆಂಜರ್‌ಗಳ ಸಮೀಕ್ಷೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೨೦೧೩ ಅಥವಾ ತದನಂತರ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕೆಲಸದಲ್ಲಿ ತೊಡಗಿಸಿಕೊಂಡವರು, ಒಣ ಮಲದ ಗುಂಡಿಗಳ ಶೌಚಾಲಯಗಳನ್ನು ಸ್ವಚ್ಛಗೊಳಿಸುವುದು, ತೆರೆದ ಮತ್ತು ಸ್ವಚ್ಚತೆ ಇಲ್ಲದ ಗುಂಡಿಯಲ್ಲಿ ಸಂಗ್ರಹವಾಗಿರುವ ಅನಾರೋಗ್ಯಕರ ಶೌಚಾಲಯಗಳ ಮಾನವರು ಮಲವನ್ನು ಶುಚಿಗೊಳಿಸುವುದು. ಒಂದು ಗುಂಡಿಯ ಶೌಚಾಲಯವನ್ನು ದೈಹಿಕ ಶ್ರಮದಿಂದ ಸ್ವಚ್ಛಗೊಳಿಸುವುದು, ಶೌಚಾಲಯದಿಂದ ಮಲ ಸೇರುವ ಚರಂಡಿಗಳನ್ನು ಸ್ವಚ್ಛಗೊಳಿಸುವ ಯಾವುದೇ ವ್ಯಕ್ತಿಗಳು ಇದ್ದಲ್ಲಿ, ವಿಜಯಪುರ ಜಿಲ್ಲೆಯ ಕೆಳಕಂಡ ಸ್ಥಳದಲ್ಲಿ ಆಯೋಜಿಸಿರುವ ಸಮೀಕ್ಷೆ ಮತ್ತು ಗುರುತಿಸುವಿಕೆಯ ಶಿಬಿರದಲ್ಲಿ ಭಾಗವಹಿಸಿ ಹೆಸರನ್ನು ನೋಂದಾಯಿಸಿಕೊಳ್ಳುವುದು.
ವಿಜಯಪುರ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೩ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೯೯೪೫೪೧೩೨೦೫, ೮೧೨೩೩೭೬೭೭೦), ತಿಕೋಟಾ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೩ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೭೭೬೦೭೧೦೬೩೯, ೬೩೬೨೫೭೮೯೩೭), ಬಬಲೇಶ್ವರ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೩ರಂದು ಬೆಳಿಗ್ಗೆ ೧೦ ಗಂಟೆಗೆ (ಸಂರ್ಪಕಿಸಬೇಕಾದ ಮೊಬೈಲ್ ಸಂಖ್ಯೆ ೯೫೯೧೫೦೯೧೩೬, ೯೫೩೫೪೮೬೯೪೯), ಇಂಡಿ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೪ರಂದು ಬೆಳಿಗ್ಗೆ ೧೦ಗಂಟೆಗೆ (ಸಂರ್ಪಕಿಸಬೇಕಾದ ಮೊಬೈಲ್ ಸಂಖ್ಯೆ ೯೦೦೮೫೪೦೫೬೬, ೯೦೩೬೬೩೭೫೦), ಚಡಚಣ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೪ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೭೩೩೮೩೨೦೭೧೨, ೯೭೪೧೬೫೪೫೬೩), ಆಲಮೇಲ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೪ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೭೬೧೯೨೯೮೬೭೮, ೯೮೮೦೨೦೫೪೬೫), ಸಿಂದಗಿ
ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೬ರಂದು ಬೆಳಿಗ್ಗೆ ೧೦ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೭೮೯೯೫೮೮೧೮೭, ೯೮೮೦೧೪೨೩೨೫), ದೇವರ ಹಿಪ್ಪರಗಿ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೬ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೮೬೧೮೧೬೩೪೪೮, ೭೭೬೦೪೦೨೦೧೮), ಬಸವನ ಬಾಗೇವಾಡಿ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೬ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೯೬೬೩೩೧೮೨೪೨, ೭೮೯೯೯೫೦೧೨೦), ಕೋಲಾರ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೬ರಂದು ಬೆಳಿಗ್ಗೆ ೧೦ ಗಂಟೆಗೆ(ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೯೪೪೮೩೩೭೩೯೩, ೯೪೮೨೦೫೮೦೧೯), ಮುದ್ದೇಬಿಹಾಳ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೭ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೯೦೧೯೭೯೫೫೫೪, ೯೬೮೬೩೧೫೫೯೧), ತಾಳಿಕೋಟೆ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೭ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೯೦೧೯೭೯೫೫೫೪, ೯೮೮೦೭೫೬೯೬೦), ನಿಡಗುಂದಿ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೭ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೮೭೨೨೪೨೪೮೪೮, ೯೧೪೮೬೩೩೪೮೨) ಇಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳುವುದು.
ಹೆಸರು ನೋಂದಾವಣೆಗೆ ಆಗಮಿಸುವ ವ್ಯಕ್ತಿಯು ಪಾಸ್ ಪೋರ್ಟ್ ಅಳತೆಯ ಒಂದು ಭಾವಚಿತ್ರ, ಬ್ಯಾಂಕ್ ಖಾತೆಯ ಪಾಸ್ ಬುಕ್ ಪ್ರತಿ, ಆಧಾರ್ ಪ್ರತಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಬಿಪಿಎಲ್ ಕಾರ್ಡ್, ಮ್ಯಾನ್ಯುಯಲ್ ಸ್ಕ್ಯಾವೆಂಜರ್ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ವೈಯಕ್ತಿಕ ವಿವರಗಳನ್ನು ಸಾಬೀತು ಪಡಿಸುವ ದಾಖಲಾತಿಗಳು, ಮ್ಯಾನ್ಯುಯಲ್ ಸ್ಕ್ಯಾವೆಂಜರ್ನಲ್ಲಿ ತೊಡಗಿಸಿಕೊಂಡಿರುವ ಕುರಿತಂತೆ ಯಾವುದೇ ದಾಖಲಾತಿಗಳನ್ನು ಸಲ್ಲಿಸಬೇಕು.
ಸದರಿ ದಾಖಲೆಗಳೊಂದಿಗೆ ಹಾಜರಾದ ಸಫಾಯಿ ಕರ್ಮಚಾರಿಗಳ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿ, ಸದರಿ ವೃತ್ತಿಯಿಂದ ಮುಕ್ತಿಗೊಳಿಸಿ. ಸ್ವಾವಲಂಬಿಗಳಾಗಿ ಬದುಕನ್ನು ಸಾಗಿಸಲು ಸರ್ಕಾರವು ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅದ್ದರಿಂದ ಈ ವೃತ್ತಿಯಲ್ಲಿ ತೊಡಗಿರುವ ಸಾರ್ವಜನಿಕರು ಈ ಸದಾವಕಾಶವನ್ನು ಬಳಸಿಕೊಳ್ಳಲು ತಮ್ಮ ಹೆಸರನ್ನು ತಪ್ಪದೇ ನೊಂದಾಯಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ತಿಳಿಸಿದ್ದಾರೆ.