Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಹಕರು ಜಾಗೃತೆಯಿಂದ ವಸುಗಳನ್ನು ಖರೀದಿಸಬೇಕು
(ರಾಜ್ಯ ) ಜಿಲ್ಲೆ

ಗ್ರಾಹಕರು ಜಾಗೃತೆಯಿಂದ ವಸುಗಳನ್ನು ಖರೀದಿಸಬೇಕು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಾವು ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಿದಲ್ಲಿ ನಾವು ಖರೀದಿಸಿದ ವಸ್ತುವಿಗೆ ಗ್ರಾಹಕರಾಗುತ್ತೇವೆ. ಖರೀದಿಸಿದ ವಸ್ತು ನಿಖರತೆಯಿಂದ ಕೂಡಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅರವಿಂದ ಹಾಗರಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಅಂಜುಮನ್ ಕಾನೂನು ಮಹಾವಿದ್ಯಾಲಯ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಆಹಾರ ಸುರಕ್ಷಾ ಇಲಾಖೆ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಹಾಗೂ ಜಿಲ್ಲಾ ಮಾಹಿತಿ ಕೇಂದ್ರ ನ್ಯೂ ಸಂಸ್ಥೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ “ಗ್ರಾಹಕರೆ ರಾಜರು ಗ್ರಾಹಕರೆ ದೇವರು” ಎಂಬ ಘೋಷ ವಾಕ್ಯದೊಂದಿದೆ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ೨೦೨೪ ಕುರಿತು ಗ್ರಾಹಕ ನ್ಯಾಯದಲ್ಲಿ ವರ್ಚುವಲ್ ಅಹವಾಲು ಆಲಿಸುವಿಕೆ ಮತ್ತು ಡಿಜಿಟಲ್ ಪ್ರವೇಶಾವಕಾಶ ಕುರಿತು ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ನಾವು ಪಡೆಯುವ ಸೇವೆಗಳು ನಮಗೆ ತೃಪ್ತಿಯಿಂದ ಕೂಡಿರಬೇಕು ನಮಗೆ ದೋಷಪೂರಿತ ಸರಕುಗಳು, ಸೇವೆಗಳಲ್ಲಿನ ಕೊರತೆ ಮತ್ತು ಅನ್ಯಾಯದ ವ್ಯಾಪಾರ ಪದ್ಧತಿಗಳಂತಹ ವಿವಿಧ ರೀತಿಯ ಶೋಷಣೆಗಳ ವಿರುದ್ಧ ಗ್ರಾಹಕರಿಗೆ ಪರಿಣಾಮಕಾರಿ ರಕ್ಷಣೆಯನ್ನು ಒದಗಿಸುವುದು ಗ್ರಾಹಕ ಸಂರಕ್ಷಣಾ ಕಾಯಿದೆಯ ಉದ್ದೇಶವಾಗಿದೆ. ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ ಮತ್ತು ಇದರೊಂದಿಗೆ ಅವರು ವಂಚನೆ, ಬ್ಲಾಕ್ ಮಾರ್ಕೆಟಿಂಗ್ ಇತ್ಯಾದಿಗಳಿಗೆ ಬಲಿಯಾಗಿದ್ದರೆ ಅವರು ಅದರ ಬಗ್ಗೆ ದೂರು ನೀಡಬಹುದು ಎಂದು ಅವರು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಹಾರ ಸುರಕ್ಷತಾ ಅಧಿಕಾರಿಗಳಾದ ಆರ್.ಎಸ್ ಬಿರಾದಾರ ಮಾತನಾಡಿ, ಪ್ರತಿಯೊಬ್ಬ ಸಾರ್ವಜನಿಕರು ವಿತರಣೆ ಹಾಗೂ ಪಡೆದುಕೊಳ್ಳುವ ಕಾರ್ಯದಲ್ಲಿ ತೊಡಗಿರುತ್ತಾರೆ. ನಮಗೆ ಇಷ್ಟ ಬಂದ ಹಾಗೆ ವಸ್ತುಗಳನ್ನು ಪಡೆದುಕೊಳ್ಳುವ ಹಕ್ಕು ನಮ್ಮದಾಗಿದೆ ಯಾವುದೇ ವಸ್ತುಗಳನ್ನು ಖರೀದಿಸುವ ಮುಂಚೆ ಇಲಾಖೆಗಳ ಮಾಡದಂಡಗಳನ್ನು ಗಮನದಲ್ಲಿಟ್ಟು ಖರಿದಿಸಬೇಕು ಗ್ರಾಹಕರ ಗ್ರಾಹಕರ ಆರೋಗ್ಯದ ಹಿತ ದೃಷ್ಟಿಯಿಂದ ಕಲಬೆರಿಕೆಯಿಂದ ಕೂಡಿದ ವಸ್ತುಗಳನ್ನು ಖರೀದಿಸಬೇಡಿ ಹಾಗೂ ಈ ಕುರಿತು ಇಲಾಖೆಗಳ ಕೈಪಿಡಿಗಳಲ್ಲಿರುವ ಮಾಹಿತಿ ತಮಗೆ ತಿಳಿದಿಬೇಕು ಒಂದು ವೇಳೆ ವಿತರಕರು ಹಕ್ಕುಗಳನ್ನು ಮೀರಿ ವರ್ತಿಸಿದಲ್ಲಿ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡೆದಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ನ್ಯಾಯವಾದಿ ಹಾಗೂ ಬಳಕೆದಾರರ ಸಂಘದ ಅಧ್ಯಕ್ಷರಾದ ಎಮ್.ಜಿ ಮಠಪತಿ ಕಾರ್ಯಕ್ರಮದ ಅತಿಥಿ ಉಪನ್ಯಾಸಕರಾಗಿ ಮಾತನಾಡಿದರು.
ಜಿಲ್ಲಾ ಗ್ರಾಹಕರ ದೂರು ಪರಿಹಾರ ಆಯೋಗದ ಪ್ರಭಾರ ಅಧ್ಯಕ್ಷೆ ವಿದ್ಯಾ ಗಲಗಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಉಪ ನಿರ್ದೇಶಕ ವಿನಯಕುಮಾರ ಪಾಟೀಲ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ನ್ಯೂ ಸಂಸ್ಥೆಯ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಅಧ್ಯಕ್ಷರಾದ ಎಸ್.ಎಮ್ ಕರೇಕಲ್, ಅಂಜುಮನ್ ಕಾನೂನು ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ.ಸಂತೋಷ ನಾಗಠಾಣ, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ವ್ಯವಸ್ಥಾಪಕ ಅಮರೇಶ ತಾಂಡೂರ, ಆಹಾರ ಶಿರಸ್ತೇದಾರ ಸಿ.ಎಸ್ ಚಿತ್ತಾಪುರ, ಆಹಾರ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ, ಎನ್.ಎಮ್ ಅತ್ತಾರ, ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಅರಕೇರಿ, ನಾಮದೇವ ಚವ್ಹಾಣ, ಅಂಜುಮನ್ ಕಾನೂನು ಮಹಾವಿದ್ಯಾಲಯ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಆಹಾರ ಸುರಕ್ಷತೆ ಕರಿತು ಕಿರು ಪುಸ್ತಕ ಬಿಡುಗಡೆಗೊಳಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!
    In ವಿಶೇಷ ಲೇಖನ
  • ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ
    In ವಿಶೇಷ ಲೇಖನ
  • ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ
    In ವಿಶೇಷ ಲೇಖನ
  • ಒಬ್ಬಂಟಿ ಜೀವಗಳ ತೊಳಲಾಟಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.