Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವಕರು ಸಾಮಾಜಿಕ ಪ್ರಗತಿಗೆ ತೊಡಗಿಸಿಕೊಳ್ಳಬೇಕು :ಜಮಾದಾರ
(ರಾಜ್ಯ ) ಜಿಲ್ಲೆ

ಯುವಕರು ಸಾಮಾಜಿಕ ಪ್ರಗತಿಗೆ ತೊಡಗಿಸಿಕೊಳ್ಳಬೇಕು :ಜಮಾದಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಯೋತ್ಪಾದನೆ, ನಕ್ಸಲ್ ಚಟುವಟಿಕೆ, ಕೋಮು ಮತ್ತು ಜಾತಿ ಭೇದದ ಸಮಸ್ಯೆಗಳಿಂದ ದೇಶದ ಪ್ರಗತಿ ಕುಂಠಿತವಾಗುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ, ಎನ್‌ಎಸ್‌ಎಸ್ ತರಬೇತಿ ಕೇವಲ ಒಂದು ಕಾರ್ಯಕ್ರಮವಾಗಿರದೆ, ಯುವಜನತೆಯ ಜೀವನದ ಪ್ರಮುಖ ಅಂಗವಾಗಬೇಕು ಎಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಸಂಘದ ಅಧ್ಯಕ್ಷ ಡಾ. ಜಾವೀದ ಜಮಾದಾರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಎನ್.ಎಸ್.ಎಸ್ ಸ್ನಾತಕ ‘ಬ’ ಹಾಗೂ ಮುಕ್ತ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ ಬೆಂಗಳೂರು, ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕೋಶದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಚಿಕ್ಕ ಚಿಕ್ಕ ಸೇವೆಗಳೂ ದೇಶದ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂಬ ಅರಿವು ಮೂಡಿಸುತ್ತವೆ. ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡುವ ಬದಲು ಸ್ವಚ್ಛತೆ, ಸಹಬಾಳ್ವೆ, ಸಮಾನತೆ ಮತ್ತು ಸಾಮಾಜಿಕ ಪ್ರಗತಿಗೆ ತೊಡಗಿಸಿಕೊಳ್ಳಬೇಕು. ಮಹಾತ್ಮ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್, ಬಸವೇಶ್ವರ, ಏಸು ಕ್ರಿಸ್ತ, ಪೈಗಂಬರ್, ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸುವ ಮೂಲಕ ಸಮಾಜದ ಒಗ್ಗಟ್ಟಿಗೆ ಶ್ರಮಿಸಬೇಕು ಎಂದರು.
ಈ ಏಳು ದಿನಗಳ ಶಿಬಿರದ ಉದ್ದೇಶಗಳು ಸೇವಾ ಮನೋಭಾವನೆ ಬೆಳೆಸುವುದು, ಪರಿಸರ ಸಂರಕ್ಷಣೆಯ ಅರಿವು ಮೂಡಿಸುವುದು, ನೈರ್ಮಲ್ಯ ಮತ್ತು ರಸ್ತೆ ಸ್ವಚ್ಛತೆಯನ್ನು ಉತ್ತೇಜಿಸುವುದು, ಮಹಿಳಾ ಮತ್ತು ಮಕ್ಕಳ ಜಾಗೃತಿ, ಸ್ತ್ರೀ ಸಬಲೀಕರಣ, ಮತದಾರರ ಜಾಗೃತಿ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಮಾರ್ಗದರ್ಶನ ನೀಡುವುದಾಗಿದೆ. ಇದರ ಮೂಲಕ ವಿದ್ಯಾರ್ಥಿಗಳು ಪರಿಪೂರ್ಣ ವ್ಯಕ್ತಿಗಳಾಗಿ ಸಮಾಜದ ಉಜ್ವಲ ಭವಿಷ್ಯ ಕಟ್ಟುವತ್ತ ಶ್ರಮಿಸಬೇಕಾಗಿದೆ ಎಂದು ಹೇಳಿ, ಮಹಿಳಾ ವಿವಿಗೆ ೫೦೦ ಗಿಡಗಳನ್ನು ಕೊಡುವ ಭರವಸೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಎನ್.ಎಸ್.ಎಸ್ ಕೋಶದ ಸಂಯೋಜನಾಧಿಕಾರಿ ಪ್ರೊ. ಅಶೋಕಕುಮಾರ ಸುರಪುರ ಮಾತನಾಡಿ, ಏಳು ದಿನಗಳ ಶಿಬಿರ ಕೇವಲ ತಾತ್ಕಾಲಿಕವಾಗಿರದೇ ಜೀವನದುದ್ದಕ್ಕೂ ಶಿಸ್ತು, ಮಾತುಗಾರಿಕೆ, ಬೆಳವಣಿಗೆ, ಸೇವಾ ಮನೋಭಾವನೆಯನ್ನು ಅಳವಡಿಸಿಕೊಳ್ಳಬೇಕು. ಹಾಗೆಯೇ ಓದುವುದು ಅಷ್ಟೇ ಅಲ್ಲ ಸಾಮಾಜಿಕ ಕಾರ್ಯಗಳಲ್ಲಿ ಬೆಳೆಯಬೇಕು. ಮೊದಲು ನಿಮ್ಮ ಮನದಿಂದ ನಂತರ ಮನೆಯಿಂದ ಸೇವೆ ಪ್ರಾರಂಭವಾಗಬೇಕು. ಕೇವಲ ಸುಂದರ ಮಹತ್ವವಲ್ಲ ಆನಂದವಾಗಿರುವುದು ಮುಖ್ಯ ಎಂದರು.
ಸಮಾರಂಭದಲ್ಲಿ ಮಹಿಳಾ ವಿವಿಯ ಡಾ. ಕಲಾವತಿ ಕಾಂಬಳೆ, ಡಾ ಅಶ್ವಿನಿ ಕೆ. ಎನ್, ಡಾ. ಅಮರನಾಥ ಪ್ರಜಾಪತಿ, ವಿವಿಧ ವಿಭಾಗದ ಪ್ರಾಧ್ಯಾಪಕರು, ಮತ್ತು ಎನ್.ಎಸ್.ಎಸ್ ಸ್ನಾತಕ ‘ಬ’ ಹಾಗೂ ಮುಕ್ತ ಘಟಕಗಳ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಸಮಾರೋಪ ಸಮಾರಂಭದಲ್ಲಿ ಋತುಜಾ ಏಳು ದಿನದ ವಾರ್ಷಿಕ ವಿಶೇಷ ಶಿಬಿರದ ವರದಿ ವಾಚಿಸಿದರು. ಲಕ್ಷ್ಮೀ ಮ್ಯಾಗೇರಿ ಸ್ವಾಗತಿಸಿದರು. ಮಂಜುಳಾ ಚವ್ಹಾಣ ನಿರೂಪಿಸಿದರು. ಮಾಯಾವತಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!
    In ವಿಶೇಷ ಲೇಖನ
  • ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ
    In ವಿಶೇಷ ಲೇಖನ
  • ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ
    In ವಿಶೇಷ ಲೇಖನ
  • ಒಬ್ಬಂಟಿ ಜೀವಗಳ ತೊಳಲಾಟಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.