Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಬ್ರಾಹಿಂಪುರದಲ್ಲಿ ವಿಜೃಂಭಣೆಯ ನಂದಬಸವೇಶ್ವರ ಜಾತ್ರೆ ಸಂಪನ್ನ
(ರಾಜ್ಯ ) ಜಿಲ್ಲೆ

ಇಬ್ರಾಹಿಂಪುರದಲ್ಲಿ ವಿಜೃಂಭಣೆಯ ನಂದಬಸವೇಶ್ವರ ಜಾತ್ರೆ ಸಂಪನ್ನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರ ಹೊರವಲಯದ ಇಬ್ರಾಹಿಂಪುರದಲ್ಲಿ ಶ್ರೀ ನಂದಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಅಲಂಕೃತ ನಂದಿಕೋಲ ಮೆರವಣಿಗೆ ಅತ್ಯಂತ ವೈಭವದಿಂದ ನಡೆಯಿತು.
ಭಕ್ತರ ಜಯಘೋಷಣೆ, ಹಾಗೂ ಮೈನವಿರೇಳಿಸುವ ಕರಡಿಮಜಲಿನ ವಾದ್ಯಮೇಳದೊಂದಿಗೆ ಮಧ್ಯಾಹ್ನ ನಂದಬಸವೇಶ್ವರ ದೇವಸ್ಥಾನದಿಂದ ಹೊರಟ ನಂದಿಕೋಲ ಮೆರವಣಿಗೆ ಪ್ರಮುಖ ಬೀದಿಯಲ್ಲಿ ಸಂಚರಿಸಿತು.
ಮೆರವಣಿಗೆಯಲ್ಲಿ ನಂದಿಕೋಲ ಮುಂದೆ ಅಧಿಕ ಸಂಖ್ಯೆಯಲ್ಲಿ ಮಕ್ಕಳು, ಯುವಕರು ಹಿರಿಯರು ಹಾಗೂ, ನಂದಿಕೋಲ ಹಿಂದೆ ನೂರಾರು ಸುಮಂಗಲೆಯರು ಕೈಯ್ಯಲ್ಲಿ ಆರತಿ ತಟ್ಟೆ ಹಿಡಿದುಕೊಂಡು ಸಾಗುತ್ತಿದ್ದರು. ಹಲವಾರು ಯುವಕರು ಪಂಚೆ ಒಂದೇ ಬಗೆಯ ಬಣ್ಣದ ಅಂಗಿ ಹಾಗೂ ತಲೆಯ ಮೇಲೆ ಪೇಠಾ ಧರಿಸಿಕೊಂಡು ತಮ್ಮ ಗೆಳೆಯರ ಬಳಗದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದ್ದು ಎಲ್ಲರ ಗಮನ ಸೆಳೆಯಿತು. ಮೆರವಣಿಗೆಯುದ್ದಕ್ಕೂ ನಂದಿಕೋಲ ಮುಂದೆ ಯುವಕರು ಗುಂಪು ಗುಂಪಾಗಿ ನಿಂತುಕೊಂಡು ಸೆಲ್ಫಿ ತೆಗೆಸಿಕೊಳ್ಳುವುದು ನಡೆದೇ ಇತ್ತು. ಮೆರವಣಿಗೆ ತಮ್ಮ ತಮ್ಮ ಮನೆಗಳತ್ತ ಸಾಗಿ ಬರುವಾಗ ನೀರು ಹಾಕಿ ನಂದಿಕೋಲ ಬಸವಣ್ಣನಿಗೆ ಹೂಹಾರ, ಶಾಲು ಹಾಕಿ,ಆರುತಿ ಬೆಳಗಿ ಭಕ್ತಿಯಿಂದ ನಮಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮೆರವಣಿಗೆಯ ವೇಳೆ ಅನೇಕರು ನಂದಿಕೋಲ ಮೇಲೆ ಚುರಮುರಿ, ಶೇಂಗಾ ಬಾಳೆಹಣ್ಣು, ಉತ್ತತ್ತಿಯನ್ನು ಹಾರಿಸಿ ಸಿಡಿಗಾಯಿ ಒಡೆದರು. ಮಲ್ಲಿಕಾರ್ಜುನ ದೇವಸ್ಥಾನದ ಮುಂದೆ ಜನಸಾಗರವೇ ಸೇರಿತ್ತು.
ಸಂಜೆ 5 ಮೆರವಣಿಗೆ ಇಬ್ರಾಹಿಂಪುರದಿಂದ ಕನಕದಾಸ ಬಡಾವಣೆ, ಅಲ್ಲಾಪುರ ಓಣಿ ಮಾರ್ಗವಾಗಿ ಭಕ್ತರ ಮನೆಗಳಿಗೆ ಭೇಟಿ ಕೊಡುತ್ತ ಶ್ರೀ ಪವಾಡ ಬಸವೇಶ್ವರ ದೇವರ ಭೇಟಿಗೆ ತೆರಳಿತು. ಅನಂತರ ರೇಲ್ವೆ ಸ್ಟೇಷನ್ ಮುಂದಿರುವ ಕರ್ನಾಟಕ ಜಿನ್ನಿಂಗ್ ಫ್ಯಾಕ್ಟರಿ ಎದುರಿಗೆ ಶ್ರೀ ನಂದಬಸವೇಶ್ವರ ಹಾಗೂ ಶ್ರೀ ಪವಾಡಬಸವೇಶ್ವರ ದೇವರ ಎದುರುಗೊಳ್ಳುವ ಕಾರ್ಯಕ್ರಮ ನಡೆಯಿತು. ಅಲ್ಲಿಂದ ಮರಳಿ ನಂದಿಕೋಲ ಮೆರವಣಿಗೆ ತಡರಾತ್ರಿ ಇಬ್ರಾಹಿಂಪುರ ನಂದಬಸವೇಶ್ವರ ದೇವಸ್ಥಾನಕ್ಕೆ ಬಂದು ಸಂಪನ್ನಗೊಂಡಿತು.
ಇಬ್ರಾಹಿಂಪುರ ಬಡಾವಣೆಯ ಹಿರಿಯರಾದ ಗಿರಮಲ್ಲಪ್ಪ ನುಚ್ಚಿ, ರೇವಣ್ಣ ನುಚ್ಚಿ, ಶಿವಸಂಗಪ್ಪ ಹಳ್ಳಿ, ಸೂರ್ಯಕಾಂತ ಗಡಗಿ, ಶಿವಪ್ಪ ಕೋವಳ್ಳಿ,
ಮಹಾನಗರ ಪಾಲಿಕೆ ಸದಸ್ಯ ಕುಮಾರ ಗಡಗಿ, ಯುವ ಮುಖಂಡರಾದ ಸುನೀಲ ನುಚ್ಚಿ, ಸಂಪತ್ತಕುಮಾರ ಕೋವಳ್ಳಿ, ಗಿರೀಶ ಕವಟಗಿ, ಬಸವರಾಜ ಹಳ್ಳಿ, ಶಾಂತು ಗಲಗಲಿ, ಶಿವಾನಂದ ನುಚ್ಚಿ, ರೇವಣ್ಣ ಬಗಲಿ, ಸಂಗು ಹಳ್ಳಿ, ಪ್ರಕಾಶ ಗಡಗಿ, ಮಲ್ಲು ಗಡಗಿ, ಶಿವಾನಂದ ಗಡಗಿ, ಪ್ರವೀಣ ಹಳ್ಳಿ, ನಂದು ಹಳ್ಳಿ, ಮಲ್ಲು ಗಡಗಿ, ಪ್ರವೀಣ ಹಳ್ಳಿ, ರಮೇಶ ಬಗಲಿ ಸೇರಿದಂತೆ ಅನೇಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!
    In ವಿಶೇಷ ಲೇಖನ
  • ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ
    In ವಿಶೇಷ ಲೇಖನ
  • ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ
    In ವಿಶೇಷ ಲೇಖನ
  • ಒಬ್ಬಂಟಿ ಜೀವಗಳ ತೊಳಲಾಟಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.