ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ವ್ಯಾಪ್ತಿಯಲ್ಲಿ ಖಾಲಿಯಿರುವ ೫೨ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ೧೨೯ ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನಂ.೦೯ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಅರ್ಜಿ ಸಲ್ಲಿಸುವ ಅವಧಿ ಪೂರ್ಣಗೊಂಡಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಪೂರ್ಣವಾಗಿರುವ ಕಾರಣ ಅಂತಹ ಅಭ್ಯರ್ಥಿಗಳಿಗೆ ಡಿ.೨೬ ರಿಂದ ಜ.೦೫, ೨೦೦೫ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್‌ನಲ್ಲಿ ಇಲಾಖೆ ವತಿಯಿಂದಲೇ ಕಾಲಾವಕಾಶ ನೀಡಿ ಆದೇಶ ಹೊರಡಿಸಲಾಗಿ ಎಂದು ಸಿಡಿಪಿಒ ಶಂಭುಲಿಂಗ ಹಿರೇಮಠ ಪ್ರಕಟಣೆಯಲ್ಲಿ ತಿಳಸಿದ್ದಾರೆ.
