ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬೆಳಗಾವಿಯ ಸುವರ್ಣಸೌಧದಲ್ಲಿಯೇ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮೇಲೆ ಹಲ್ಲೆಯ ಯತ್ನವನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಪ್ರಭು ತಳಗೇರಿ ಖಂಡಿಸಿದ್ದಾರೆ.
ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಹೇಯ ಕೃತ್ಯ ನಡದಿದೆ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ಕಾನೂನು ಯಾವ ರೀತಿಯಲ್ಲಿ ಕಾರ್ಯ ಮಾಡುತ್ತಿದೆ ಎನ್ನುವುದು ಅನುಮಾನ ಕಾಡುತ್ತಿದೆ? ಇನ್ನು ಜನಸಾಮಾನ್ಯರ ಗತಿಯೇನು? ಮತ್ತೆ ಮಾನ್ಯ ಸಚಿವೆಯರು ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು. ಎಲ್ಲದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸದನದ ಕಾರಿಡಾರಿನಲ್ಲಿಯೇ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್ ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಏನೂ ಅರ್ಥ. ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ ಕಾರಿಡಾರಿನ ಕಬ್ಬಿಣದ ಬಾಗಿಲನ್ನು ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ.
ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ದ ರೌಡಿಪಟ್ಟಿ ತೆರೆಯಬೇಕು. ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ, ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು ಮತ್ತು ತಕ್ಷಣ ಅವರನ್ನು ಬಂಧಿಸಬೇಕು ಎಂದು ಹೇಳಿದರು

