Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ವಹಿಸಿ :ಎಡಿಸಿ ಗೆಣ್ಣೂರ
(ರಾಜ್ಯ ) ಜಿಲ್ಲೆ

ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ವಹಿಸಿ :ಎಡಿಸಿ ಗೆಣ್ಣೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗೆಜೆಟೆಡ್ ಪ್ರೊಬ್ರೇಷನರ್ ಗ್ರೂಪ್ ಎ ಹಾಗೂ ಗ್ರೂಪ್ ಬಿ ವೃಂದದ ಪರೀಕ್ಷೆ ಪೂರ್ವಭಾವಿ ಸಭೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮುಂದಿನ ಆಡಳಿದ ಅಧಿಕಾರಿಗಳು ರೂಪುಗೊಳ್ಳುವ ಪರೀಕ್ಷೆ ಇದಾಗಿದ್ದು, ಅತ್ಯಂತ ಎಚ್ಚರಿಕೆ, ಸೂಕ್ಷ್ಮವಾಗಿ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ೨೦೨೩-೨೪ನೇ ಸಾಲಿನ ಗೆಜೆಟೆಡ್ ಪ್ರೊಬ್ರೇಷನರ್ ಗ್ರೂಪ್ ಎ ಹಾಗೂ ಗ್ರೂಪ್ ಬಿ ವೃಂದದ ಪರಿಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಿಸೆಂಬರ್.೨೯ರ ರವಿವಾರ ನಡೆಯುವ ೩೨ ಕೇಂದ್ರಗಳಲ್ಲಿ ಒಟ್ಟು ೧೨೭೪೧ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಬೆಳಿಗ್ಗೆ ೧೦ಗಂಟೆಯಿಂದ ೧೨ಗಂಟೆಯ ವರೆಗೆ ಒಂದನೇ ಅಧಿವೇಶನ ಮದ್ಯಾಹ್ನ ೨ಗಂಟೆಯಿಂದ ೪ ಗಂಟೆಯ ವರೆಗೆ ಎರಡನೇ ಅವಧಿವೇಶನ ಪರೀಕ್ಷೆಗಳು ಜರುಗಲಿವೆ. ಅಭ್ಯರ್ಥಿಗಳು ಪರೀಕ್ಷಾ ದಿನಗಳಂದು ಬೆಳಗಿನ ಹಾಗೂ ಮಧ್ಯಾಹ್ನದ ಅಧಿವೇಶನಗಳ ಪರೀಕ್ಷೆ ಪ್ರಾರಂಭವಾಗುವ ೦೨ ಗಂಟೆ ಮೊದಲು ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸುವುದು.
ಪರೀಕ್ಷಾ ಕೇಂದ್ರಗಳಿಗೆ ಉಪಕೇಂದ್ರಗಳ ಮೇಲ್ವಿಚಾರಣೆಗೆ ಓರ್ವ ಎ ಹಾಗೂ ಬಿ ದರ್ಜೆಯ ಅಧಿಕಾರಿಯನ್ನು ನೇಮಿಸಿವುದು ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಕೊಂಡೊಯ್ಯಲು ಮಾರ್ಗಾಧಿಕಾರಿಯನ್ನು ನೇಮಿಸಿ ಅವರಿಗೆ ಬೆಂಗಾವಲು ಕಾರ್ಯಕ್ಕಾಗಿ ಓರ್ವ ಸಶಸ್ತ್ರ ಪೊಲೀಸ್ ಸಿಬ್ಬಂದಿ, ಗ್ರೂಪ್-ಡಿ ಸಿಬ್ಬಂದಿ, ವಾಹನದ ವ್ಯವಸ್ಥೆಗೆ ಅವರು ಸೂಚನೆ ನೀಡಿದರು.
ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಬೇಕು. ಅಭ್ಯರ್ಥಿಗಳ ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್ ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿಕೊಳ್ಳಬೇಕು. ಪರೀಕ್ಷಾ ಶುರುವಾಗುವ ಅರ್ಧಗಂಟೆಯ ಮುಂಚೆ ಜಾಮರ್ ಆನ್ ಮಾಡುವುದು, ಪರೀಕ್ಷಾ ಮುಗಿದ ಅರ್ಧ ಗಂಟೆಯ ನಂತರ ಬಂದ್ ಮಾಡುವುದು. ಎಲ್ಲಾ ಸಿಸಿಟಿವಿ ಕ್ಯಾಮಾರಗಳ ವಿಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಕ್ಷಿಸಲು ಮಾನಿಟರ್ ಅಳವಡಿಸಿ ವೆಬ್ ಕಾಸ್ಟಿಂಗ್ ಮಾಡಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಪ್ರತಿ ಅಭ್ಯರ್ಥಿಯ ಮಧ್ಯೆ ೨ ಮೀಟರ್ ಅಂತರವಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಪರಿಕ್ಷಾ ಕೊಠಡಿಗಳಿಗೆ ತೆರಳಲು ಅನುಕೂಲವಾಗುವಂತೆ ವೀಲ್‌ಚೇರ-ಇಳಿಜಾರು ಸೌಲಭ್ಯ ಒದಗಿಸಬೇಕು. ಹಿಯರಿಂಗ್ ಏಯ್ಡ್ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಅಭ್ಯರ್ಥಿಗಳ ಗುರುತೀನ ಚೀಟಿ ತಪಾಸಣೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ಮಹಿಳಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಬೇಕು. ಮೊಬೈಲ್, ಕ್ಯಾಲಕುಲೇಟರ್, ಸೇರಿದಂತೆ ಯಾವುದೇ ಇಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದೇ ಇರುವುದು ಖಚಿತ ಪಡಿಸಿಕೊಳ್ಳಬೇಕು ಎಂದು ಸೂಚಿಸಿ, ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ ಪರೀಕ್ಷಾ ದಿನದಂದು ಪರೀಕ್ಷೆಗಳು ಸುಗಮವಾಗಿ ನಡೆಯಲು ಪೋಲಿಸ್ ಇಲಾಖೆಯಿಂದ ಎಲ್ಲ ರೀತಿಯ ಸಹಾಯ ಸಹಕಾರಿ ನೀಡಲಾಗುವುದು ಎಂದು ಅವರು ಸಭೆಗೆ ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!
    In ವಿಶೇಷ ಲೇಖನ
  • ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ
    In ವಿಶೇಷ ಲೇಖನ
  • ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ
    In ವಿಶೇಷ ಲೇಖನ
  • ಒಬ್ಬಂಟಿ ಜೀವಗಳ ತೊಳಲಾಟಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.