Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣ
(ರಾಜ್ಯ ) ಜಿಲ್ಲೆ

ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ | ‘ಗಾಂಧಿ ಭಾರತ’ ಕಾರ್ಯಕ್ರಮಗಳಿಗೆ ಚಾಲನೆ

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ‌ ಅವರು ಗುರುವಾರ ಅನಾವರಣಗೊಳಿಸಿದರು. ಇದರೊಂದಿಗೆ ‘ಗಾಂಧಿ ಭಾರತ’ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಇದೇ ವೇಳೆ ವೀರಸೌಧದ ಆವರಣದಲ್ಲಿನ ಗಾಂಧಿ ಸ್ಮಾರಕ ಭವನದಲ್ಲಿನ ನವೀಕೃತ ಫೋಟೊ ಗ್ಯಾಲರಿಯನ್ನು‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.
ಬಳಿಕ ವೀರಸೌಧ (ಕಾಂಗ್ರೆಸ್ ಬಾವಿ) ಆವರಣದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಜಂಟಿಯಾಗಿ ಸಸಿ ನೆಟ್ಟು ನೀರೆರೆದರು.
ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ, ಶರಣಬಸಪ್ಪ ದರ್ಶನಾಪುರ, ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ‌ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ‌‌ ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಓ ರಾಹುಲ್ ಶಿಂಧೆ, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ, ಉಪ ನಿರ್ದೆಶಕರಾದ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.

ನವ ಸತ್ಯಾಗ್ರಹ ಬೈಠಕ್ 2025

ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ 100ನೇ ವರ್ಷಾಚರಣೆ ಹಾಗೂ ರಾಜಕೀಯ ಮತ್ತು ಚುನಾವಣಾ ಸವಾಲುಗಳಿಗೆ ಕಾರ್ಯತಂತ್ರ ರೂಪಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ)ಯು ನವ ಸತ್ಯಾಗ್ರಹ ಬೈಠಕ್ 2025 ಆರಂಭಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.
100 ವರ್ಷಗಳ ಹಿಂದೆ ಮಹಾತ್ಮ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಸ್ಥಳದಲ್ಲಿಯೇ ಐತಿಹಾಸಿಕ ಸಭೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಸೇರಿದಂತೆ ಇತರರು ಐತಿಹಾಸಿಕ ಸಭೆಯಲ್ಲಿ ಭಾಗವಹಿಸಿದ್ದರು.

“ಮುಂಬರುವ ಸವಾಲುಗಳನ್ನು ಎದುರಿಸಲು ಸಿದ್ಧರಾಗಲು ಕಾಂಗ್ರೆಸ್ ಮುಂದಿನ ವರ್ಷಕ್ಕೆ ಕ್ರಿಯಾ ಯೋಜನೆಯನ್ನು ಸಿಡಬ್ಲೂಸಿ ಸಭೆಯಲ್ಲಿ ನಿರ್ಧರಿಸಲಿದೆ. ಗೃಹ ಸಚಿವ ಅಮಿತ್ ಶಾ ಅವರು ಬಿಆರ್ ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವನ್ನು ಚರ್ಚೆಗೆ ತೆಗೆದುಕೊಳ್ಳಲಾಗುವುದು. ಇದರ ವಿರುದ್ಧ ಪ್ರಬಲ ಹೋರಾಟ ಮಾಡುವ ಬಗ್ಗೆ ವಿರೋಧ ಪಕ್ಷವು ತೀರ್ಮಾನಿಸಲಿದೆ. ಮಹಾತ್ಮ ಗಾಂಧಿಯವರ ಪರಂಪರೆಯನ್ನು ರಕ್ಷಿಸಲು, ಸಂರಕ್ಷಿಸಲು ಮತ್ತು ಉತ್ತೇಜಿಸಲು ಕಾಂಗ್ರೆಸ್ ತನ್ನನ್ನು ತಾನು ಪುನಃ ಸಮರ್ಪಿಸಿಕೊಳ್ಳುತ್ತದೆ. ನಾವೆಲ್ಲರೂ ಒಟ್ಟಾಗಿ ಬಾಪು ಅವರ ಸಿದ್ಧಾಂತ ಮತ್ತು ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುತ್ತೇವೆ ಮತ್ತು ದ್ವೇಷದ ರಾಜಕೀಯವನ್ನು ಸತ್ಯ ಮತ್ತು ಅಹಿಂಸೆಯಿಂದ ಸೋಲಿಸುತ್ತೇವೆ.”

– ಜೈರಾಮ್ ರಮೇಶ್
ಪ್ರಧಾನ ಕಾರ್ಯದರ್ಶಿ ಸಂವಹನದ ಉಸ್ತುವಾರಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!
    In ವಿಶೇಷ ಲೇಖನ
  • ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ
    In ವಿಶೇಷ ಲೇಖನ
  • ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ
    In ವಿಶೇಷ ಲೇಖನ
  • ಒಬ್ಬಂಟಿ ಜೀವಗಳ ತೊಳಲಾಟಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.