ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು ೬೭ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೬೪ ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದೆ. ೪ ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ದಿನಾಂಕ: ೨೬-೧೨-೨೦೨೪ ರಿಂದ ದಿನಾಂಕ: ೦೫-೦೧-೨೦೨೫ ರಂದು ಸಂಜೆ ೫.೩೦ ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್‌ನಲ್ಲಿ ಇಲಾಖಾ ವತಿಯಿಂದ ಅವಕಾಶ ನೀಡಿ ಆದೇಶಿಸಲಾಗಿದೆ. ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸುವಾಗ ಅಧಿಸೂಚನೆಯ ಕೊನೆಯ ದಿನಾಂಕದ ಒಳಗಿನ ದಾಖಲಾತಿಗಳನ್ನು ಅಪ್‌ಲೋಡ್ ಮಾಡಲು ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ(ಇಂಡಿ) ಇಲ್ಲಿಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.