Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.31ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ
(ರಾಜ್ಯ ) ಜಿಲ್ಲೆ

ಡಿ.31ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾರಿಗೆ ನೌಕರರ ವೇತನ ಪರಿಷ್ಕರಣೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸೇರಿ ಮತ್ತಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, ಡಿ.31 ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ “ಅನಿರ್ಧಿಷ್ಟಾವಧಿ ಮುಷ್ಕರ” ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಿ ಬೆಂಬಲಿಸಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ
ಜಂಟಿ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷ ಎಂ.ಹೆಚ್.ಅಗರಖೇಡ ಹಾಗೂ ಪ್ರ.ಕಾರ್ಯದರ್ಶಿ ಐ.ಐ.ಮುಶ್ರೀಫ್ ತಿಳಿಸಿದರು.
ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ‌ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಂಟಿ‌ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರತಿದಿನ ಸುಮಾರು ಒಂದು ಕೋಟಿಗೂ ಹೆಚ್ಚಿನ ಪ್ರಯಾಣಿಕರನ್ನು ರಾಜ್ಯದ ಮೂಲೆ ಮೂಲೆಗೆ ತಲುಪಿಸುವ ಮೂಲಕ ಹಾಗೂ ಶಕ್ತಿ ಯೋಜನೆಯ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಟ್ಟಿರುವ ನಾಲ್ಕೂ ಸಾರಿಗೆ ನಿಗಮಗಳ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯ ನೌಕರರ ಬೇಡಿಕೆಗಳ ಬಗ್ಗೆ ಸರ್ಕಾರ ನಿರ್ಲಕ್ಷ ದೋರಣೆ ತಳೆದಿದೆ ಎಂದರು.
ಜ.25 ರಂದೇ ಸಾರಿಗೆ ನಿಗಮಗಳ ಆಡಳಿತ ವರ್ಗ ಹಾಗೂ ರಾಜ್ಯ ಸರ್ಕಾರಕ್ಕೆ ಸಾರಿಗೆ ನಿಗಮಗಳ ಸಮಸ್ತ ನೌಕರರ ಪರವಾಗಿ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿತ್ತು. ತದನಂತರ ಆಡಳಿತ ವರ್ಗ ಮತ್ತು ಸಾರಿಗೆ ಸಚಿವರಿಗೆ, ಮುಖ್ಯಮಂತ್ರಿಗಳಿಗೆ ಈಗಾಗಲೇ ಹಲವಾರು ಪತ್ರಗಳನ್ನು ಬರೆಯಲಾಗಿದೆ. ಆದರೂ ಈವರೆಗೂ ಸರ್ಕಾರದಿಂದಾಗಲೀ ಅಥವಾ ಸಾರಿಗೆ ನಿಗಮಗಳ ಆಡಳಿತ ವರ್ಗದಿಂದಾಗಲೀ ಯಾವುದೇ ರೀತಿಯ ಸ್ಪಂದನೆ ಸಿಗದಿರುವುದು ಕಾರ್ಮಿಕರಿಗೆ ತೀವ್ರ ನಿರಾಶೆ ಮೂಡಿಸಿದೆ.
ಇದಲ್ಲದೇ ಆಗಸ್ಟ್ 13 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಮಾವೇಶ, ಆ.27ರಂದು ಕಲಬುರಗಿ ನಗರದಲ್ಲಿ ಹಾಗೂ ಆ.28 ರಂದು ಹುಬ್ಬಳ್ಳಿಯಲ್ಲಿ ನಿಗಮಮಟ್ಟದ ಸಮಾವೇಶಗಳ ಮೂಲಕ ಶಾಂತಿಯುತ ಚಳುವಳಿಯ ಸಿದ್ದತೆ ನಡೆಸಿದೆ. ಸೆ.12ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಒಂದು ದಿನದ ಶಾಂತಿಯುತ ಧರಣಿ ಸತ್ಯಾಗ್ರಹ ಮಾಡಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಇತ್ಯರ್ಥಪಡಿಸಲು ಸೆ.26ರ ವರೆಗೆ ಕಾಲಾವಕಶ ನೀಡಲಾಗಿತ್ತು. ಅಲ್ಲದೇ ಅ.09ರಂದು ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಡಳಿತ ವರ್ಗದವರು ಸ್ಪಷ್ಟವಾಗಿ ಪ್ರಯಾಣದರ ಪರಿಷ್ಕರಣೆಯಾಗದೆ ವೇತನ ಪರಿಷ್ಕರಣೆ ಕಷ್ಟ ಸಾಧ್ಯ ಎಂಬ ಸಂದೇಶವನ್ನು ಕೊಟ್ಟಿದ್ದಾರೆ.
ರಾಜ್ಯ ಸರ್ಕಾರವು ಸಾರಿಗೆ ನೌಕರರ ಬೇಡಿಕೆಗಳಿಗೆ ನ್ಯಾಯ ದೊರಕಿಸಬಹುದೆಂದು ಎದುರು ನೋಡುತ್ತಿದ್ದಾರೆ. ಈಗಾಗಲೇ ಹಿಂದಿನ ವೇತನ ಹೆಚ್ಚಳದ ಅವಧಿಯ 38 ತಿಂಗಳ ಬಾಕಿ ಹಣ ಬಂದಿರುವುದಿಲ್ಲ. ಅಲ್ಲದೇ ಬೆಲೆ ಏರಿಕೆಯಿಂದಲೂ ಸಾರಿಗೆ ನೌಕರರು ತತ್ತರಿಸುತ್ತಿದ್ದು, ನಿಗಮಗಳ ನೌಕರರು ಅತೃಪ್ತಿಯಿಂದ ಸರ್ಕಾರದ ವಿಳಂಬ ದೋರಣೆ ವಿರುದ್ಧ ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಜಂಟಿ ಕ್ರಿಯಾ ಸಮಿತಿಯು ನವಂಬರ್ 22 ರಂದು ಪೂರ್ವಭಾವಿ ಸಭೆ ಮಾಡಿ, ಸರ್ಕಾರದ ಕಣ್ತೆರೆಸಲು ನಾಲ್ಕೂ ಸಾರಿಗೆ ನಿಗಮಗಳ ಎಲ್ಲಾ ವರ್ಗಗಳ ನೌಕರರೂ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಅನಿವಾರ್ಯವಾಗಿ ಡಿಸೆಂಬರ್ 31 ಮಂಗಳವಾರ ಬೆಳಿಗ್ಗೆ 6:00 ಗಂಟೆಯಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಶಾಂತಿಯುತ ಮುಷ್ಕರಕ್ಕೆ ಕರೆ ನೀಡಿರುತ್ತೇವೆ. ಈ ಮುಷ್ಕರ ಯಶಸ್ವಿಗೆ ಸಾರಿಗೆ ನಿಗಮಗಳ ಇತರೆ ಕಾರ್ಮಿಕ ಸಂಘಟನೆಗಳು, ವಿವಿಧ ಸಂಘಸಂಸ್ಥೆಗಳು ಕೈಜೊಡಿಸಿವೆ. ಸಾರ್ವಜನಿಕರು ಮುಷ್ಕರಕ್ಕೆ ಸಹಕಾರ ನೀಡುವ ಮೂಲಕ ನಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಅವರು ಕೋರಿದರು.
ಈ ವೇಳೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜಿಲ್ಲಾ ಸಂಚಾಲಕರುಗಳಾದ ಜಿ.ಎಂ. ಬಿರಾದಾರ್. ರಮೇಶ ಮಡ್ಡಿಮನಿ, ಮೋಹನ ಗುನ್ನಾಪೂರ, ಯುವರಾಜ್ ಪರ್ನಾಕರ, ಈರಣ್ಣ ತೊಂಡಿಕಟ್ಟಿ ಹೆಚ್.ಬಿ.ಬಬಲೇಶ್ವರ, ಬಿ.ಎಂ.ಮರಾಠೆ, ಅರುಣಕುಮಾರ ಹಿರೇಮಠ, ಎಸ್.ಬಿ.ಪಟ್ಟಣಶೆಟ್ಟಿ, ಶಿವಾನಂದ್ ಭೈಚಬಾಳ್. ಎಂ.ಎನ್.ನದಾಫ್, ಮಸ್ತಾಕ್ ಹುಂಡೇಕಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!
    In ವಿಶೇಷ ಲೇಖನ
  • ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ
    In ವಿಶೇಷ ಲೇಖನ
  • ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ
    In ವಿಶೇಷ ಲೇಖನ
  • ಒಬ್ಬಂಟಿ ಜೀವಗಳ ತೊಳಲಾಟಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.