ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಡಿ.೨೯ ರಂದು ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ ಮತ್ತು ಪಡಿಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಅತ್ಯಂತ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.
ಅಂದು ಬೆಳಿಗ್ಗೆ ೧೦ಕ್ಕೆ ಅದ್ಧೂರಿ ವಾದ್ಯ ವೈಭವಗಳೊಂದಿಗೆ ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಶ್ರೀ ಕಾಳಿಕಾ ದೇವಿ ದೇವಸ್ಥಾನದಿಂದ ಪ್ರಮುಖ ರಸ್ತೆಗಳ ಮೂಲಕ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದವರೆಗೆ ಪಲ್ಲಕ್ಕಿ ಉತ್ಸವ ಹಾಗೂ ಶ್ರೀ ಅಯ್ಯಪ್ಪಸ್ವಾಮಿ ಉತ್ಸವ ಮೂರ್ತಿಯ ಅದ್ಧೂರಿ ಮೆರವಣಿಗೆ ನಡೆಯುವದು. ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ೬ಕ್ಕೆ ಮಹಾಪೂಜೆ ಹಾಗೂ ಪಡಿಪೂಜೆ ಪ್ರಾರಂಭವಾಗುವದು. ಭಕ್ತಾದಿಗಳು ಆಗಮಿಸಿ ಶ್ರೀ ಮಣಿಕಂಠನ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನ ಕಮೀಟಿಯವರು ವಿನಂತಿಸಿದ್ದಾರೆ.
