Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳ ಸಂಭ್ರಮಾಚರಣೆ
(ರಾಜ್ಯ ) ಜಿಲ್ಲೆ

ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳ ಸಂಭ್ರಮಾಚರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವೇಶ್ವರ ಕೋ-ಆಪರೇಟಿವ್ಹ್ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಪ್ರತಿಷ್ಠಿತ ಬಸವೇಶ್ವರ ಕೋ-ಆಪರೇಟಿವ್ಹ್ ಬ್ಯಾಂಕಿನ ಆಡಳಿತ ಮಂಡಳಿಯ ಎಂಟು ನಿರ್ದೇಶಕ ಸ್ಥಾನಗಳಿಗೆ ಭಾನುವಾರ ತೀವ್ರ ಕುತೂಹಲ ಮೂಡಿಸಿದ ಚುನಾವಣೆಯಲ್ಲಿ ಸಂಜೆ ಜರುಗಿದ ಚುನಾವಣೆಯ ಫಲಿತಾಂಶ ಹೊರಬಂದ ನಂತರ ಐವರು ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕರು ಆಯ್ಕೆಯಾದರೆ, ಹಿಂದಿನ ಆಡಳಿತ ಮಂಡಳಿಯ ಪೆನಲ್ ಬಿಟ್ಟು ಮೂವರು ಹೊಸದಾಗಿ ಸ್ಫರ್ಧೆ ಮಾಡಿದ್ದ ಹೊಸ ಪೆನಲ್‌ಗೆ, ಇನ್ನೊರ್ವ ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕರಿಗೆ ಮತದಾರರು ಅವಕಾಶ ನೀಡಿದ್ದು ಗಮನ ಸೆಳೆಯಿತು.
ಬಸವೇಶ್ವರ ಕೋ-ಆಪರೇಟಿವ್ಹ್ ಬ್ಯಾಂಕು ಒಟ್ಟು ೧೩ ನಿರ್ದೇಶಕರ ಆಡಳಿತ ಮಂಡಳಿಯನ್ನು ಹೊಂದಿದೆ. ಇದರಲ್ಲಿ ಐದು ಜನ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ ಎಂಟು ಸ್ಥಾನಗಳಿಗೆ ಸ್ಪರ್ಧೆ ನಡೆದ ಹಿನ್ನೆಲೆಯಲ್ಲಿ ಡಿ.೨೯ ರಂದು ಚುನಾವಣೆ ನಿಗದಿಯಾಗಿತ್ತು. ಚುನಾವಣೆ ಮತದಾನ ಪ್ರಕ್ರಿಯೆ ಸ್ಥಳೀಯ ಗುರುಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಬ್ಯಾಂಕಿನ ಒಟ್ಟು ೬೮೨ ಮತದಾರರ ಪೈಕಿ ೬೫೬ ಮತದಾರರು ಇಂದು ಜರುಗಿದ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ.
ಮತ ಎಣಿಕೆ ಜರುಗಿದ ನಂತರ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಹಿಂದಿನ ಆಡಳಿತ ಮಂಡಳಿಯ ಅಧ್ಯಕ್ಷ ಲೋಕನಾಥ ನೇಮಿಚಂದ ಅಗರವಾಲ(೪೬೩ ಮತ), ಸಿದ್ರಾಮ(ಮುತ್ತು) ರೇವಣಸಿದ್ದಪ್ಪ ಕಿಣಗಿ (೩೨೬ ಮತ), ಜಗದೀಶ ಬಸಪ್ಪ ಕೊಟ್ರಶೆಟ್ಟಿ (೩೫೫ ಮತ), ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕ ಬಸವರಾಜ ಈರಪ್ಪ ಗೊಳಸಂಗಿ(೩೬೦ ಮತ), ಅನಿಲ ಈರಪ್ಪ ದುಂಬಾಳಿ (೪೪೨ ಮತ), ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕ ಶಂಕರಗೌಡ ಶಿವನಗೌಡ ಬಿರಾದಾರ(೪೦೮ ಮತ), ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕ ಉಮೇಶ ಸದಾಶಿವಪ್ಪ ಹಾರಿವಾಳ (೩೬೫ ಮತ), ಪರಿಶಿಷ್ಟ ಜಾತಿ ಕ್ಷೇತ್ರದಿಂದ ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕ ನೀಲು ಖುಬಾಜಿ ನಾಯಕ (೪೨೩ ಮತ) ಪಡೆದು ಉಳಿದ ಎಂಟು ನಿರ್ದೇಶಕ ಸ್ಥಾನಗಳಿಗೆ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಎಂ.ಹಂಗರಗಿ ಘೋಷಿಸಿದರು.
ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳ ಹೆಸರು ಘೋಷಣೆಯಾಗುತ್ತಿದ್ದಂತೆ ವಿಜೇತ ಅಭ್ಯರ್ಥಿಗಳಿಗೆ ಅವರ ಬೆಂಬಲಿಗರು, ಹಿತೈಷಿಗಳು, ಸ್ನೇಹಿತರು ಗುಲಾಲು ಎರಚಿ ಹೂವಿನ ಹಾರ ಹಾಕಿ ಸನ್ಮಾನಿಸಿ ಸಿಹಿ ಹಂಚಿ ಸಂಭ್ರಮಾಚರಿಸಿದರು. ವಿಜೇತ ಅಭ್ಯರ್ಥಿಗಳು ತಮ್ಮ ತಮ್ಮ ಬೆಂಬಲಿಗರೊಂದಿಗೆ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ದೇವಸ್ಥಾನಕ್ಕೆ ತೆರಳಿ ದೇವರಿಗೆ ಆರತಿ ಬೆಳಗಿ ನಮನ ಸಲ್ಲಿಸಿದರು. ನಂತರ ಬಸವೇಶ್ವರ ವೃತ್ತದಲ್ಲಿ ಪಟಾಕ್ಷಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಅವಿರೋಧ ಆಯ್ಕೆಃ ಸಾಮಾನ್ಯ ಮಹಿಳಾ ಕ್ಷೇತ್ರದಿಂದ ಸುರೇಖಾ ಈರಣ್ಣ ಪಟ್ಟಣಶೆಟ್ಟಿ,ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕಿ ಕಮಲಾ ಲಿಂಗನಗೌಡ ತಿಪ್ಪನಗೌಡರ, ಹಿಂದುಳಿದ ವರ್ಗ(ಬ) ಕ್ಷೇತ್ರದಿಂದ ಶಿವಾನಂದ ಬಸಪ್ಪ ಪಟ್ಟಣಶೆಟ್ಟಿ, ಹಿಂದುಳಿದ ವರ್ಗ(ಅ) ಕ್ಷೇತ್ರದಿಂದ ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕ ಶ್ರೀಶೈಲ ಚಂದ್ರಶೇಖರ ಪತ್ತಾರ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಯಮನಪ್ಪಗೌಡ ಕೃಷ್ಣಪ್ಪಗೌಡ ಪಾಟೀಲ ಅವರು ಉಳಿದ ಐದು ಸ್ಥಾನಗಳಿಗೆ ಆಯ್ಕೆಯಾಗಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.