ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶರಣು ವಿಶ್ವ ವಚನ ಫೌಂಡೇಷನ್ ಮೈಸೂರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಇವರ ಸಹಯೋಗದಲ್ಲಿ ಮೈಸೂರಿನ ವಿಜಯನಗರದ ಕನ್ನಡ ಸಾಹಿತ್ಯ ಭವನದಲ್ಲಿ ಈಚೆಗೆ ನಡೆದ ೧೦ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಮಾಜ ಮುಖಿ ಕಾರ್ಯ, ಉತ್ತಮ ಬೋಧನೆ, ತರಬೇತಿ ನೀಡುವ ಕೌಶಲ್ಯ ಹಾಗೂ ಸ್ಲಮ್ ಮಕ್ಕಳಿಗಾಗಿ ಉಚಿತ ಕಲಿಕಾ ಕೇಂದ್ರ ಸ್ಥಾಪಿಸಿ ಪಾಠ ಬೋಧನೆ ಮಾಡುವಲ್ಲಿ ಯಶಸ್ವಿಯಾಗಿರುವ ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಸೈಂಟಿಸ್ಟ, ಇಂಡಿಯಾದ ಕರ್ನಾಟಕ ಸ್ಟೇಟ್ ಡೈರೆಕ್ಟರ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವಿಜಯಪುರದ ಖಜಾಂಚಿ, ಕಿಡ್ಸ್ಜೋನ್ ಶಾಲೆಯ ಆಡಳಿತಾಧಿಕಾರಿ ಹಾಗೂ ಶಿಕ್ಷಕಿ ಶ್ರೀಮತಿ ಸುಮಾ ಚೌಧರಿ ಇವರಿಗೆ ಫೌಂಡೇಷನ್‌ನ ಸಂಸ್ಥಾಪಕ ಡಾ.ವಚನ ಕುಮಾರಸ್ವಾಮಿ, ಶ್ರೀಮತಿ ರೂಪಾಕುಮಾರ ಸ್ವಾಮಿ, ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ್, ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ಹಾಗೂ ಅತಿಥಿಗಳು “ರಾಜ್ಯ ಮಟ್ಟದ ಚಿನ್ಮಯ ಜ್ಞಾನಿ ಶಿಕ್ಷಕ ಪ್ರಶಸ್ತಿ” ನೀಡಿ ಗೌರವಿಸಿದರು.
ಚಿನ್ಮಯಜ್ಞಾನಿ ಪ್ರಶಸ್ತಿಗೆ ಭಾಜನರಾದ ಶ್ರೀಮತಿ ಸುಮಾ ಚೌಧರಿ ಇವರಿಗೆ ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಸೈಂಟಿಸ್ಟ, ಇಂಡಿಯಾದ ಸೌತ್ ಜೋನ್ ಡೈರೆಕ್ಟರ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವಿಜಯಪುರ ಜಿಲ್ಲಾ ಅಧ್ಯಕ್ಷರು, ರಾಜ್ಯ ಪ್ರಶಸ್ತಿ ಪುರಸ್ಕೃತರೂ ಆದ ಎಸ್. ವಿ. ಬುರ್ಲಿ, ಕ.ರಾ.ವೈ.ಸಂ.ಪ.ನ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಉಷಾದೇವಿ ಹಿರೇಮಠ, ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಮಿಸಾಳೆ, ಉಪಾಧ್ಯಕ್ಷ ಬಿ. ಆಯ್.ಪರಂಡಿ, ಸ ಬಿ. ಎ. ಆಸಂಗಿ, ತಾಲ್ಲೂಕಾ ಅಧ್ಯಕ್ಷರಾದ ಬೀರಪ್ಪ ಖಂಡೆಕಾರ, ರಾಜಕುಮಾರ ಚವ್ಹಾಣ, ಸದಸ್ಯರಾದ ಶ್ರೀಮತಿ ಜಯಶ್ರೀ ಬುರ್ಲಿ, ಶ್ರೀಮತಿ ಜ್ಯೋತಿ ದೇಸಾಯಿ, ರಾಜಕುಮಾರ ಅರಗೆ, ಮಹಾದೇವ ದೇವರ, ಬಸವರಾಜ ಚೌಧರಿ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

