ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಎರಡು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮುಖ್ಯ ಕಾನೂನು ನೆರವು ಅಭಿರಕ್ಷಕರ ಒಂದು ಹುದ್ದೆ, ಉಪ ಮುಖ್ಯ ಕಾನೂನು ನೆರವು ಅಭಿರಕ್ಷಕರ ಒಂದು ಹುದ್ದೆ ಹಾಗೂ ಸಹಾಯಕ ಕಾನೂನು ನೆರವು ಅಭಿರಕ್ಷಕರ ಒಂದು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು, ಜನವರಿ ೧೦,೨೦೨೫ ರೊಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎಡಿಆರ್ ಕಟ್ಟಡ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ವಿಜಯಪುರ ಇವರಿಗೆ ಸಲ್ಲಿಸುವಂತೆಯೂ ಹೆಚ್ಚಿನ ಮಾಹಿತಿಗಾಗಿ https://vijayapura.dcourts.gov.in/dlsaಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
