ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇಂಡಿ ಶಿಶು ಅಭಿವೃದ್ಧಿಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ೬೭ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೬೪ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್-ಲೈನ್ ಮೂಲಕ ಅರ್ಜಿಸಲ್ಲಿಸಲು ದಿನಾಂಕ ೦೯-೧೧-೨೦೨೪ರ ವರೆಗೆ ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವ ೦೪ ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ದಿನಾಂಕ: ೨೬-೧೨-೨೦೨೪ ರಿಂದ ದಿನಾಂಕ: ೦೫-೦೧-೨೦೨೫ ರವರಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್‌ನಲ್ಲಿ ಇಲಾಖಾ ವತಿಯಿಂದ ಅವಕಾಶ ನೀಡಿ ಆದೇಶಿಸಲಾಗಿರುತ್ತದೆ. ಅಪೂರ್ಣಗೊಂಡ ಕಾರ್ಯಕರ್ತೆ/ಸಹಾಯಕಿಯರ ಪಟ್ಟಿಯನ್ನು ಸಂಬAಧಿಸಿದ ಗ್ರಾಮ ಪಂಚಾಯತ ಹಾಗೂ ಪುರಸಭೆಯಲ್ಲಿ ಪ್ರಕಟಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ, ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
