Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಿಯಾಂಕ್ ಖರ್ಗೆಯನ್ನು ಟಾರ್ಗೆಟ್ ಮಾಡುತ್ತಿರುವ ಬಿಜೆಪಿ
(ರಾಜ್ಯ ) ಜಿಲ್ಲೆ

ಪ್ರಿಯಾಂಕ್ ಖರ್ಗೆಯನ್ನು ಟಾರ್ಗೆಟ್ ಮಾಡುತ್ತಿರುವ ಬಿಜೆಪಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ | ಸಾಕ್ಷಿಯೇ ಇಲ್ಲದೆ ಬಿಜೆಪಿ ಆರೋಪ | ಗೃಹ ಸಚಿವ ಜಿ ಪರಮೇಶ್ವರ ಸಮರ್ಥನೆ

ಬೆಂಗಳೂರು: ಕಳೆದ ವಾರ ಬೀದರ್‌ನಲ್ಲಿ ನಡೆದ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜೀನಾಮೆಗೆ ಒತ್ತಾಯಿಸುತ್ತಿರುವ ತಮ್ಮ ಸಂಪುಟ ಸಹೋದ್ಯೋಗಿ ಪ್ರಿಯಾಂಕ್ ಖರ್ಗೆ ಅವರನ್ನು ಗೃಹ ಸಚಿವ ಜಿ ಪರಮೇಶ್ವರ ಸಮರ್ಥಿಸಿಕೊಂಡಿದ್ದು, ಸಿಐಡಿ ತನಿಖೆಯಿಂದ ಸತ್ಯ ಹೊರಬೀಳಲಿದೆ ಎಂದು ಮಂಗಳವಾರ ಹೇಳಿದ್ದಾರೆ.
ಗುತ್ತಿಗೆದಾರರು ಪ್ರಿಯಾಂಕ್ ಖರ್ಗೆ ಅವರ ಆಪ್ತರೊಬ್ಬರ ವಿರುದ್ಧ ಆರೋಪ ಮಾಡಿರುವ ಏಳು ಪುಟಗಳ ಡೆತ್ ನೋಟ್‌ ದೊರಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿರುವ ಬಿಜೆಪಿ, ಜನವರಿ 4ರೊಳಗೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಇಲ್ಲವಾದರೆ, ಕಲಬುರಗಿಯಲ್ಲಿ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದೆ.
‘ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಡೆತ್‌ನೋಟ್‌ನಲ್ಲಿ ತಮ್ಮ ಹೆಸರಿಲ್ಲ ಎಂದು ಸ್ವತಃ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಬಿಜೆಪಿಯವರು ಅವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಯಾವುದೇ ಸಾಕ್ಷ್ಯವಿಲ್ಲದೆ ಅನಗತ್ಯವಾಗಿ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ’ ಎಂದು ಪರಮೇಶ್ವರ ಅವರು ಪ್ರತಿಕ್ರಿಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಈ ಮಟ್ಟಕ್ಕೆ ಇಳಿಯಬಾರದು. ಈ ಹಿಂದೆ ತಾವೂ ಸಹ ಕೇಂದ್ರದಲ್ಲಿ ಸರ್ಕಾರ ನಡೆಸಿದ್ದೇವೆ. ಸರ್ಕಾರ ನಡೆಸುವಾಗ ನಾವೆಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತೇವೆ. ಪ್ರಿಯಾಂಕ್ ಖರ್ಗೆ ಕೂಡ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಲಾಗುತ್ತಿದೆ. ಯಾವುದೇ ಪೂರಕ ಸಾಕ್ಷ್ಯಗಳಿದ್ದರೆ ನಾವು ಸ್ವೀಕರಿಸುತ್ತೇವೆ ಎಂದು ಅವರು ಹೇಳಿದರು.
ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯ ಒಳಗೆ ಮತ್ತು ಹೊರಗೆ ಹಲವಾರು ಸಂದರ್ಭಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ತಪ್ಪುಗಳನ್ನು ಸಾರ್ವಜನಿಕವಾಗಿ ಎತ್ತಿ ತೋರಿಸಿದ್ದಾರೆ. ಅದು ಅವರಿಗೆ ಇಷ್ಟವಾಗುವುದಿಲ್ಲ. ಹೀಗಾಗಿ, ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿದರು.

ಪ್ರಕರಣವನ್ನು ಸಿಐಡಿಗೆ ಹಸ್ತಾಂತರ

ಆರೋಪಿ ರಾಜು ಕಪನೂರನನ್ನು ಪೊಲೀಸರು ಇನ್ನೂ ಬಂಧಿಸದಿರುವ ಕುರಿತು ಕೇಳಿದ ಪ್ರಶ್ನೆಗೆ, ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಅನಾವಶ್ಯಕವಾಗಿ ಆರೋಪ ಮಾಡುವುದು ಸರಿಯಲ್ಲ, ಸಿಐಡಿ ತನಿಖೆಯಾಗಲಿ, ಸತ್ಯಾಂಶ ಹೊರಬೀಳಲಿದೆ. ಹಣಕಾಸು ವ್ಯವಹಾರ ನಡೆದಿದೆಯೇ ಅಥವಾ ಇತರೆ ವಿಷಯಗಳು ವಿಚಾರಣೆಯಿಂದ ಗೊತ್ತಾಗಲಿದೆ ಎಂದು ಗೃಹಸಚಿವರು ಪ್ರತಿಕ್ರಿಯಿಸಿದರು.

ಸರ್ಕಾರದ ಮಟ್ಟದಲ್ಲಿ ತೀರ್ಮಾನ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್ ತೂಗುದೀಪ ಹಾಗೂ ಇತರ ಆರೋಪಿಗಳಿಗೆ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ರಾಜ್ಯ ಸರ್ಕಾರದ ನಿರ್ಧಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ.ಪರಮೇಶ್ವರ, ‘ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನಿಸಲಾಗಿದೆ. ನಿನ್ನೆ ಆದೇಶ ಹೊರಡಿಸಲಾಗಿದೆ’ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.