ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ಸಿ.ಎಸ್.ಷಡಕ್ಷರಿ ಅವರು ಜನೇವರಿ 3 ಶುಕ್ರವಾರದಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜಿಲ್ಲಾ ನೌಕರರ ಸಂಘದ ವತಿಯಿಂದ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.
ಬೆಳಗ್ಗೆ 10 ಗಂಟೆಗೆ ಇಂಡಿ ಪಟ್ಟಣದ ನೌಕರರ ಭವನದಲ್ಲಿ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ವಿಜಯಪುರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಏರ್ಪಡಿಸಿದ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವದ ಸಮಾರಂಭ ಹಾಗೂ ಎರಡನೇ ಬಾರಿ ಆಯ್ಕೆಯಾದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಿ.ಎಸ್.ಷಡಕ್ಷರಿ ನೆರವೇರಿಸುವರು. ಅಧ್ಯಕ್ಷತೆಯನ್ನು ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ವಹಿಸುವರು. ಸ್ವಾಗತವನ್ನು ಖಜಾಂಚಿ ಜುಬೇರ ಕೆರೂರ, ರಾಜ್ಯ ಪರಿಷತ್ ಸದಸ್ಯ ವಿಜಯಕುಮಾರ ಹತ್ತಿ ನೆರವೇರಿಸುವರು. ಜಿಲ್ಲಾ ಕಾರ್ಯದರ್ಶಿ ಎಂ.ಡಿ.ಪಾಟೀಲ, ಸದಾಶಿವ ದಳವಾಯಿ, ಶಿವಾನಂದ ಮಂಗನವರ, ಅಶೋಕ ತೆಲ್ಲೂರ, ಬಿ.ಎಸ್.ಮಜ್ಜಗಿ, ಅರವಿಂದ ಹೂಗಾರ, ಬಸವರಾಜ ರಾವೂರ, ಬಿ.ಟಿ.ಗೌಡರ ಭಾಗವಹಿಸುವರು.
ಸಮಸ್ಯ ರಾಜ್ಯ ಸರ್ಕಾರಿ ನೌಕರರ ಆಶಾಕಿರಣ ಷಡಕ್ಷರಿ ಅವರು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಇಲಾಖೆಯ ನೌಕರರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ತಿಳಿಸಿದ್ದಾರೆ.

