ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಪ್ರಕಟಿಸಿರುವ ೨೦೨೫ನೆಯ ವರ್ಷದ ಕ್ಯಾಲೆಂಡರ್‌ನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಕ್ಯಾಲೆಂಡರ್ ಸಮಿತಿ ಅಧ್ಯಕ್ಷ ಪ್ರೊ.ಓಂಕಾರ ಕಾಕಡೆ, ಸದಸ್ಯ ಸಂಚಾಲಕರಾದ ಡಾ.ದೀಪಕ ಶಿಂದೆ, ಸದಸ್ಯರಾದ ಪ್ರೊ.ಸಕ್ಪಾಲ್ ಹೂವಣ್ಣ, ಪ್ರೊ.ವಿಷ್ಣು ಶಿಂದೆ, ಪ್ರೊ.ಉದಯಕುಮಾರ ಕುಲಕರ್ಣಿ ಹಾಗೂ ಪ್ರೊ.ರೇಣುಕಾ ಮೇಟಿ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ಡೀನರು, ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು.

