Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..

ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!

ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ.೩ ರಂದು ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಪೂರ್ವಭಾವಿ
(ರಾಜ್ಯ ) ಜಿಲ್ಲೆ

ಜ.೩ ರಂದು ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಪೂರ್ವಭಾವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಈರಕಾರ ಮುತ್ಯಾ ದೇವಸ್ಥಾನದ ಆವರಣದಲ್ಲಿ ಜ.೩ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಯ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಕ್ರಾಂತಿವೀರ ಬ್ರಿಗೇಡ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮರೇಶಣ್ಣ ಕಾಮನಕೇರಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದು ಧರ್ಮದ ರಕ್ಷಣೆಗಾಗಿ ರಾಜ್ಯದಲ್ಲಿ ಕ್ರಾಂತಿವೀರ ಬ್ರಿಗೇಡ್ ಸಂಘಟನೆ ಅಸ್ತಿತ್ವಕ್ಕೆ ಬರಲಿದೆ. ಈ ಸಂಘಟನೆಯು ಫೆ.೪ ರಂದು ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ನಾಡಿನ ವಿವಿಧ ೧೦೦೮ ಪೂಜ್ಯರ, ಮಠಾಧೀಶರ ಪಾದಪೂಜೆಯೊಂದಿಗೆ ಉದ್ಘಾಟನೆಯಾಗಲಿದೆ. ಇದೊಂದು ಜಾತ್ಯಾತೀತ, ಪಕ್ಷಾತೀತ ಸಂಘಟನೆಯಾಗಿದೆ. ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಸಾಕಷ್ಟು ಸಣ್ಣ-ಪುಟ್ಟ ಸಮಾಜಗಳು ಮರೆಯಾಗುತ್ತಿರುವದು ವಿಷಾದಕರ ಸಂಗತಿ. ಸರ್ಕಾರದ ಯಾವುದೇ ಸೌಲಭ್ಯಗಳು ಸರಿಯಾಗಿ ತಲುಪುತಿಲ್ಲ. ಈ ನಿಟ್ಟಿನಲ್ಲಿ ಸಮಾಜದಲ್ಲಿ ತುಳಿತಕ್ಕೊಳಗಾದ, ಸರ್ಕಾರದ ಸೌಲಭ್ಯದಿಂದ ವಂಚಿತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈ ಸಂಘಟನೆ ಧ್ವನಿ ಎತ್ತಲಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ಸಣ್ಣ ಸಣ್ಣ ಸಮಾಜಗಳನ್ನು ಮೇಲೆತ್ತುವ ಸದುದ್ದೇಶವನ್ನು ಸಂಘಟನೆ ಹೊಂದಿದೆ ಎಂದರು.
ಕಾರ್ಯಕ್ರಮದ ಉಸ್ತುವಾರಿ ಕಲ್ಲು ಸೊನ್ನದ ಮಾತನಾಡಿ, ಫೆ. ೪ ರಂದು ಬಸವ ಜನ್ಮಸ್ಥಳದಲ್ಲಿ ಕ್ರಾಂತಿವೀರ ಬ್ರಿಗೇಡ್ ಸಂಘಟನೆ ಉದ್ಘಾಟನೆಗೊಳ್ಳುವ ಮೂಲಕ ಬೃಹತ್ ರಾಜ್ಯಮಟ್ಟದ ಸಮಾರಂಭ ಈ ನೆಲದಲ್ಲಿ ನಡೆಯಲಿದೆ. ಜ.೩ ರಂದು ಬಸವನಬಾಗೇವಾಡಿಯ ಈರಕಾರ ಮುತ್ಯಾ ದೇವಸ್ಥಾನದಲ್ಲಿ, ಜ. ೫ ರಂದು ವಿಜಯಪುರದಲ್ಲಿ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ ಕರೆಯಲಾಗಿದೆ. ಈ ಸಭೆಗಳಿಗೆ ಎಲ್ಲ ಸಮಾಜದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ-ಸೂಚನೆ ನೀಡುವ ಮೂಲಕ ಯಶಸ್ವಿಗೊಳಿಸಬೇಕೆಂದರು. ಸುದ್ದಿಗೋಷ್ಠಿಯಲ್ಲಿ ಮುದಕಣ್ಣ ಹೊರ್ತಿ, ಸಿದ್ದಣ್ಣ ಹೆರಕಲ್, ಸುನೀಲ ಜಮಖಂಡಿ, ಶಿವರಾಯ ಕಲಬುರ್ಗಿ, ಸಂಗಣ್ಣ ಹಚ್ಯಾಳ, ರವಿ ನಾಯ್ಕೋಡಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..

ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!

ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ

ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
  • ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
    In (ರಾಜ್ಯ ) ಜಿಲ್ಲೆ
  • ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದ ವಿದ್ಯಾಸ್ಪೂರ್ತಿ ಶಾಲೆಯ ಅನುಮತಿ ರದ್ದು!
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ತಾಪಂ ಸ್ವೀಪ್ ಸಮಿತಿಯಿಂದ ಎಸ್ಐಆರ್ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಪ್ರಗತಿ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಜು.೧೪ರಿಂದ ಸೋಮದೇವರಹಟ್ಟಿ ತಾಂಡಾ ದುರ್ಗಾದೇವಿಯ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026
    In ದಿನಪತ್ರಿಕೆ
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.