ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2024-25ನೇ ಸಾಲಿನ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ -I, II(ಎ), III(ಎ) ಹಾಗೂ III(ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಾಂಗ ವೇತನ/ ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿಶ್ವವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಟ್ಟ ಸಂಸ್ಥೆಗಳಲ್ಲಿ ಪ್ರಥಮ ವರ್ಷ ಪಿಎಚ್ ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಜನವರಿ 20 ರೊಳಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಆಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವಿವರಣೆಗಾಗಿ ಇಲಾಖೆ ವೆಬ್-ಸೈಟ್ https://bcwd.karnataka.gov.in ಹಾಗೂ ಮೊ.ಸಂ. 8050770004ಗ ಗೆ ಸಂರ್ಕಿನಸಬಹುದು ಎಂದು ಪ್ರಕಟಣೆ ತಿಳಿಸಿದೆ
